HomeKarnatakaGOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 1 ವಾರದೊಳಗೆ 8000...

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 1 ವಾರದೊಳಗೆ 8000 ಕಾನ್’ಸ್ಟೇಬಲ್ ಹುದ್ದೆ ಭರ್ತಿ

ಬೆಂಗಳೂರು : ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಗೃಹ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಮುಂದಿನ ಒಂದು ವಾರದೊಳಗೆ 8,000 ಪೊಲೀಸ್ ಕಾನ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದರು.ಮುಂದಿನ ಒಂದು ವಾರದಲ್ಲಿ 8,000 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಿದೆ.ಈಗಾಗಲೇ ತರಬೇತಿ ಮುಗಿಸಿರುವ 545 ಪಿಎಸ್‌ಐಗಳು ಅಧಿಕೃತವಾಗಿ ಇಲಾಖೆಗೆ ಸೇರ್ಪಡೆಗೊಂಡಿದ್ದಾರೆ. ಶೀಘ್ರದಲ್ಲೇ ಒಟ್ಟು 600 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಸಕ್ತ ವರ್ಷದಲ್ಲಿ ರಾಜ್ಯದ ವಿವಿಧೆಡೆ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆಯಾಗಲಿದೆ ಎಂದರು.

“ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಗೊಂದಲಗಳಿಂದಾಗಿ ನೇಮಕಾತಿ ವಿಳಂಬವಾಗಿತ್ತು, ಈಗ ಆ ಸಮಸ್ಯೆ ಬಗೆಹರಿದಿದೆ. ಒಟ್ಟು 56,834 ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದ್ದು, ಅದರಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ,” ಎಂದು ಡಾ. ಜಿ. ಪರಮೇಶ್ವರ್ ವಿವರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಇಲಾಖೆ ಸೇರಲು ಬಯಸುವ ಅಭ್ಯರ್ಥಿಗಳು ದೈಹಿಕ ಕಸರತ್ತು ಮತ್ತು ಲಿಖಿತ ಪರೀಕ್ಷೆಗೆ ಸಿದ್ಧತೆ ನಡೆಸಲು ಇದು ಸೂಕ್ತ ಸಮಯವಾಗಿದೆ.ಈ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲಿದ್ದು, ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಒಳಗಾಗಬಾರದು ಎಂದು ಸಚಿವರು ಇದೇ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular