HomeLatest Newsಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್: ‘ಅನ್ನಭಾಗ್ಯ’ದ ಜೊತೆಗೆ ‘ಇಂದಿರಾ ಕಿಟ್’ ಯೋಜನೆ ಜಾರಿಗೆ

ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್: ‘ಅನ್ನಭಾಗ್ಯ’ದ ಜೊತೆಗೆ ‘ಇಂದಿರಾ ಕಿಟ್’ ಯೋಜನೆ ಜಾರಿಗೆ

ಹಾಸನ: ಸರ್ಕಾರ ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಅವರು ತಿಳಿಸಿದ್ದಾರೆ.

ಅರಕಲಗೂಡಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಇಂದಿರಾ ಕಿಟ್ ಯೋಜನೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದರು.

ಅರಕಲಗೂಡು ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗೆ ಅರಕಲಗೂಡು ತಾಲ್ಲೂಕು 99% ಗುರಿ ಸಾಧಿಸಿದೆ ಎಂದು ಪುಷ್ಪ ಅಮರನಾಥ್ ಅವರು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನಿಲ್ದಾಣದ ಸ್ವಚ್ಚತೆ ಕಾಯ್ದುಕೊಳ್ಳಬೇಕು, ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಗತ್ಯವಿದ್ದಲ್ಲಿ ಹೆಚ್ಚಿನ ಬಸ್ ಗಳನ್ನು ನಿಯೋಜಿಸುವಂತೆ ತಿಳಿಸಿದರು.  ಅರಕಲಗೂಡು ತಾಲ್ಲೂಕಿನಲ್ಲಿ ಶೇ 99 ರಷ್ಟು ಗುರಿ ಸಾದಿಸಿರುವುದಕ್ಕೆ ಅಧಿಕಾರಿಗಳಿಗೆ ಮತ್ತು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಿಗೆ ಅಭಿನಂದನೆಯನ್ನು ತಿಳಿಸಿದರು.

 ಈ ವೇಳೆಯಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅರಕಲಗೂಡು ತಾಲ್ಲೂಕು ಅಧ್ಯಕ್ಷ ಶ್ರೀಧರ್ ಗೌಡ, ತಹಶೀಲ್ದಾರ್ ಸೌಮ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular