ಬೆಂಗಳೂರು : ರಾಜ್ಯ ಸರ್ಕಾರದಿಂದ ಮುಸ್ಲಿಂ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.15 ಕ್ಕೆ ಹೆಚ್ಚಳ ಮಾಡಿದೆ.
ಹೌದು. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.10 ರಷ್ಟು ಇದ್ದಂತಹ ಮೀಸಲಾತಿಯನ್ನು ಶೇ.15 ಕ್ಕೆ ಹೆಚ್ಚಳ ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಇತ್ತೀಚೆಗೆ ಅಂಗೀಕರಿಸಲಾಗಿತ್ತು. ಆದರೆ ಇದು ತೀವ್ರ ವಿರೋಧಕ್ಕೆ ಕಾರಣವಾಗಿತ್ತು.