HomeLatest Newsಕೃಷಿ, ಗಾರ್ಮೆಂಟ್ಸ್ ಸೇರಿ ಅಸಂಘಟಿತ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಇಎಸ್ಐಸಿ ಆಸ್ಪತ್ರೆಗಳಲ್ಲಿ ಉಚಿತ...

ಕೃಷಿ, ಗಾರ್ಮೆಂಟ್ಸ್ ಸೇರಿ ಅಸಂಘಟಿತ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಇಎಸ್ಐಸಿ ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಸೇವೆ

ಕಲಬುರಗಿ: ದೇಶದಲ್ಲಿ ಪ್ರಸ್ತುತ ಇರುವ ಇಎಸ್ಐಸಿ ಆಸ್ಪತ್ರೆಗಳಲ್ಲಿ ಸಂಘಟಿತ ವಲಯದ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆ ನೀಡಲಾಗುತ್ತಿದೆ. ಇನ್ನು ಮುಂದೆ ಕೃಷಿ, ಗಾರ್ಮೆಂಟ್ಸ್, ಗಿಗ್ ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರಿಗೂ ಇಎಸ್ಐಸಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಉಚಿತವಾಗಿ ಲಭ್ಯವಾಗಲಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಹಾಯಕ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಕ್ರೀಡಾ ಸಂಕೀರ್ಣ, ಛಾವಣಿಯ ಸೌರ ವಿದ್ಯುತ್ ವ್ಯವಸ್ಥೆ ಮತ್ತು ಅಂತರ್ಜಲ ಮರುಪೂರಣ ಸೌಲಭ್ಯ ಉದ್ಘಾಟಿಸಿ ಅವರು ಮಾತನಾಡಿ, ಸಂಘಟಿತ ಮತ್ತು ಅಸಂಘಟಿತ ವಲಯದ ಶ್ರಮಿಕ ವರ್ಗಕ್ಕೆ ಸಾಮಾಜಿಕ ಭದ್ರತೆ ಕಲ್ಪಿಸಬೇಕೆಂಬ ಪ್ರಧಾನಿ ಮೋದಿ ಅವರ ಇಚ್ಛಾಶಕ್ತಿಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗಲು ದೇಶಾದ್ಯಂತ 10 ಮೆಡಿಕಲ್ ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಕರ್ನಾಟಕದಲ್ಲಿ ಪ್ರಸ್ತುತ ಎರಡು ಇಎಸ್ಐಸಿ ಮೆಡಿಕಲ್ ಕಾಲೇಜುಗಳಿವೆ. ದೇಶಾದ್ಯಂತ ಇಎಸ್ಐಸಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ನಿಯಮ ಸರಳೀಕರಣ ಮಾಡಿ ಅಗತ್ಯವಿರುವ ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular