ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಎಲ್ 5 ಸಹ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಹೊಸ ವರ್ಷದ ಆಚರಣೆಗೆ ನಾಲ್ಕು ದಿನಗಳಷ್ಟೇ ಬಾಕಿಯಿದ್ದು, ಬೆಂಗಳೂರು ನಗರದಾದ್ಯಂತ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದೆ.

