ನವದೆಹಲಿ: ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ ನೀಡಿದ್ದಾರೆ.
ಈಗ ಭಾರಿ ದುಬಾರಿಯಾಗಿರುವ ವಿದ್ಯುತ್ ಚಾಲಿತ(ಇವಿ) ವಾಹನಗಳ ಬೆಲೆ ಇನ್ನು ನಾಲ್ಕರಿಂದ ಆರು ತಿಂಗಳಲ್ಲಿ ಪೆಟ್ರೋಲ್ ವಾಹನಗಳ ದರಕ್ಕೆ ಸಮನಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸರ್ಕಾರ ಉತ್ತೇಜನ ನೀಡುತ್ತಿರುವುದು ಮತ್ತು ಜನರು ಹೆಚ್ಚಿನ ಒಲವು ತೋರುತ್ತಿರುವುದರ ನಡುವೆಯೇ ನಿತಿನ್ ಗಡ್ಕರಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಪಳೆಯುಳಿಕೆ ಇಂಧನಗಳ ಮೇಲೆ ಅವಲಂಬಿತರಾಗಿರುವುದು ಆರ್ಥಿಕತೆ ಮತ್ತು ಪರಿಸರದ ದೃಷ್ಟಿಯಿಂದ ಹಾನಿಕಾರಕ. ಈಗ ದುಬಾರಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಬೆಲೆ ಇನ್ನು ನಾಲ್ಕರಿಂದ ಆರು ತಿಂಗಳಲ್ಲಿ ಪೆಟ್ರೋಲ್ ವಾಹನಗಳ ಬೆಲೆಗೆ ಸಮನಾಗುತ್ತದೆ ಎಂದು ಹೇಳಿದ್ದಾರೆ.