ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಎರಡು ಮೂರು ದಿನದಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಈ ಕುರಿತಾದ ಕಡತವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಒಂದೇ ಬಾರಿ ನೇಮಕ ಮಾಡಿಕೊಂಡರೆ ಪೂರಕ ತರಬೇತಿ ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಖಾಲಿ ಇರುವ 15000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಒಂದು ಬಾರಿಗೆ 5 ಸಾವಿರದಂತೆ ನೇಮಕ ಮಾಡಿಕೊಳ್ಳಲಾಗುವುದು. ಈಗ 4,600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಇನ್ನೂ ಎರಡು ಮೂರು ದಿನದಲ್ಲಿ ಅಧಿಸೂಚನೆ ಆಗಲಿದೆ ಎಂದು ಹೇಳಿದ್ದಾರೆ.
545 ಸಬ್ ಇನ್ಸ್ಪೆಕ್ಟರ್ ನೇಮಕಾತಿ ನಡೆಯುತ್ತಿದ್ದು, ತರಬೇತಿ ನೀಡಲಾಗುತ್ತಿದೆ. ನಾಲ್ಕು ತಿಂಗಳಲ್ಲಿ ಎಲ್ಲರೂ ಇಲಾಖೆಗೆ ಸೇರಲಿದ್ದಾರೆ. 402 ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಆದೇಶ ನೀಡಲಾಗಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
