HomeJobsಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 4,600 ಕಾನ್ ಸ್ಟೆಬಲ್ ನೇಮಕಾತಿಗೆ 2 ದಿನದಲ್ಲಿ ಅಧಿಸೂಚನೆ:...

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 4,600 ಕಾನ್ ಸ್ಟೆಬಲ್ ನೇಮಕಾತಿಗೆ 2 ದಿನದಲ್ಲಿ ಅಧಿಸೂಚನೆ: ಹಂತ ಹಂತವಾಗಿ 15 ಸಾವಿರ ಪೊಲೀಸ್ ನೇಮಕ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಎರಡು ಮೂರು ದಿನದಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಈ ಕುರಿತಾದ ಕಡತವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಒಂದೇ ಬಾರಿ ನೇಮಕ ಮಾಡಿಕೊಂಡರೆ ಪೂರಕ ತರಬೇತಿ ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಖಾಲಿ ಇರುವ 15000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಒಂದು ಬಾರಿಗೆ 5 ಸಾವಿರದಂತೆ ನೇಮಕ ಮಾಡಿಕೊಳ್ಳಲಾಗುವುದು. ಈಗ 4,600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಇನ್ನೂ ಎರಡು ಮೂರು ದಿನದಲ್ಲಿ ಅಧಿಸೂಚನೆ ಆಗಲಿದೆ ಎಂದು ಹೇಳಿದ್ದಾರೆ.

545 ಸಬ್ ಇನ್ಸ್ಪೆಕ್ಟರ್ ನೇಮಕಾತಿ ನಡೆಯುತ್ತಿದ್ದು, ತರಬೇತಿ ನೀಡಲಾಗುತ್ತಿದೆ. ನಾಲ್ಕು ತಿಂಗಳಲ್ಲಿ ಎಲ್ಲರೂ ಇಲಾಖೆಗೆ ಸೇರಲಿದ್ದಾರೆ. 402 ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಆದೇಶ ನೀಡಲಾಗಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular