HomeKarnatakaBREAKING : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ 'ಯುವನಿಧಿ' ನೋಂದಣಿಗೆ 'CM ಸಿದ್ದರಾಮಯ್ಯ' ಅಧಿಕೃತ...

BREAKING : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ನೋಂದಣಿಗೆ ‘CM ಸಿದ್ದರಾಮಯ್ಯ’ ಅಧಿಕೃತ ಚಾಲನೆ

ಬೆಂಗಳೂರು : ಡಿಪ್ಲೊಮಾ, ಪದವೀಧರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್  ನಲ್ಲಿ ನಡೆದ ಯುವನಿಧಿ ನೋಂದಣಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ   ಅಧಿಕೃತ  ಚಾಲನೆ ನೀಡಿದರು.ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.  

ಹೌದು, ಈ ಮೂಲಕ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 12 ರಿಂದ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಇಂದಿನಿಂದ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ. ಡಿಸೆಂಬರ್ 26 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಯುವ ನಿಧಿ ನಿರುದ್ಯೋಗ ಭತ್ಯೆ ಯಾರಿಗೆ ಎಷ್ಟು?

ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ
ಡಿಪ್ಲೊಮೋ ಪದವೀಧರರಿಗೆ ಪ್ರತಿ ತಿಂಗಳು 1500 ರೂಪಾಯಿ

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

ಎಲ್ಲಿ ಅರ್ಜಿ ಸಲ್ಲಿಸಬಹುದು?

ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.

ಆರು ತಿಂಗಳವರೆಗೆ ಯಾವುದೇ ಕೆಲಸ ಸಿಗದಿದ್ದರೆ ಅಥವಾ ಅವರು ಎಲ್ಲಾದ್ರೂ ಸ್ವಉದ್ಯೋಗ ಕೈಗೊಳ್ಳದಿದ್ದರೆ, ಉನ್ನತ ಶಿಕ್ಷಣಕ್ಕೆ ಹೋಗದಿದ್ದರೆ ಯುವನಿಧಿ ಯೋಜನೆಗೆ ಅರ್ಹರು. ಯುವನಿಧಿ ಯೋಜನೆಯಡಿ ಡಿಪ್ಲೋಮಾ ಪದವಿ ಪಡೆದವರಿಗೆ 1,500 ರೂ. ಪದವೀಧರರಿಗೆ 3,000 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳವರೆಗೆ ನೀಡಲಾಗುತ್ತದೆ.

ಈ ದಾಖಲೆಗಳು ಬೇಕು..!

ಎಸ್ ಎಸ್ ಎಲ್ ಸಿ ಅಂಕ ಪಟ್ಟಿ
ಪಿಯುಸಿ ಅಂಕಪಟ್ಟಿ
ಸಿಇಟಿ ರಿಜಿಸ್ಟ್ರೇಶನ್
ರೇಷನ್ ಕಾರ್ಡ್
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
ಬ್ಯಾಂಕ ಖಾತೆಯ ವಿವರ
ಇ-ಮೇಲ್ ಐಡಿ
ಮೊಬೈಲ್ ಸಂಖ್ಯೆ
ಭಾವಚಿತ್ರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular