HomeLive Newsಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ...

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ

ಬೆಂಗಳೂರು: ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜತೆಗೆ ರಾಗಿ ಮತ್ತು ಜೋಳವನ್ನು ವಿತರಿಸಲಾಗುವುದು.

ಪ್ರಸ್ತುತ ಪ್ರತಿ ವ್ಯಕ್ತಿಗೆ ರಾಜ್ಯದಿಂದ 5 ಕೆಜಿ, ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಈ ಪೈಕಿ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಕೋಟ್ಯಂತರ ಜನರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ವಿತರಿಸುತ್ತಿದ್ದು, ಇದರೊಂದಿಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ರಾಗಿ ಹಾಗೂ 2 ಕೆಜಿ ಅಕ್ಕಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ಜೋಳ ಮತ್ತು 2 ಕೆಜಿ ಅಕ್ಕಿ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುತ್ತದೆ. ಕೆಲವು ಭಾಗದಲ್ಲಿ ರಾಗಿ ಬಳಕೆ ಮಾಡಿದರೆ ಮತ್ತೆ ಕೆಲವು ಕಡೆ ಜೋಳ ಬಳಸುತ್ತಾರೆ. ಹೀಗಾಗಿ ಜನ ಏನನ್ನು ಇಷ್ಟಪಡುತ್ತಾರೋ ಅದನ್ನೇ ನೀಡಲಾಗುವುದು ಎಂದು ಹೇಳಲಾಗಿದೆ.

ರೈತರಿಂದ ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಜೋಳವನ್ನು ಖರೀದಿಸಿ ಸಂಗ್ರಹಿಸಲಾಗುತ್ತಿದೆ. ಮೇ ತಿಂಗಳವರೆಗೆ ಖರೀದಿ ನಡೆಯಲಿದ್ದು, 10 ತಿಂಗಳಿಗೆ ವಿತರಿಸುವಷ್ಟು ರಾಗಿ, ಜೋಳ ಖರೀದಿಸಿ ಸಂಗ್ರಹಿಸಿ ಇಡಲಾಗುತ್ತದೆ. ಈಗಾಗಲೇ ಕೇಂದ್ರ ಸರ್ಕಾರಕ್ಕೆ ರಾಗಿ, ಜೋಳ ವಿತರಣೆ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳವನ್ನು ಕೇಂದ್ರದ ಅನುಮತಿ ಮೇರೆಗೆ ಮೇ ತಿಂಗಳಿನಿಂದ ವಿತರಿಸಲಾಗುವುದು.

ರಾಜ್ಯದಲ್ಲಿ 1,16,51,209 ಬಿಪಿಎಲ್ ಕಾರ್ಡುಗಳಿದ್ದು, 3,93,29,981 ಫಲಾನುಭವಿಗಳು ಇದ್ದಾರೆ. 10,83,977 ಅಂತ್ಯೋದಯ ಕಾರ್ಡುಗಳಿದ್ದು 43,81,789 ಫಲಾನುಭವಿಗಳಿದ್ದಾರೆ.

ವಿತರಣೆಗೆ ಮಾಸಿಕ 30,000 ಮೆಟ್ರಿಕ್ ಟನ್ ರಾಗಿ, 8,000 ಮೆಟ್ರಿಕ್ ಟನ್ ಜೋಳ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದ್ದು, ಮೇ ತಿಂಗಳಿನಿಂದ ಅಕ್ಕಿಯ ಜತೆಗೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಗಿ, ಜೋಳ ವಿತರಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular