ಮಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ 13,000 ಶಿಕ್ಷಕರು, ಅನುದಾನಿತ ಶಾಲೆಗಳಿಗೆ 5800 ಶಿಕ್ಷಕರು ಸೇರಿದಂತೆ ಒಟ್ಟು 18,800ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಿದ್ಧತೆ ನಡೆದಿದೆ. ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು.
ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸರ್ಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದ್ದು, ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕಾತಿ ನಡೆಯಲಿದೆ. ಒಟ್ಟು 188,00ಕ್ಕೂ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಪ್ರಕ್ರಿಯೆ ಸಿದ್ಧತೆ ನಡೆದಿದ್ದು ಶೀಘ್ರವೇ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಇದಿಗ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಎಲ್ಕೆಜಿಯಿಂದ 10ನೇ ತರಗತಿಯವರೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಡಿ ಶೇಕಡ 80ರಷ್ಟು ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಮಕ್ಕಳ ಫಲಿತಾಂಶ ಉತ್ತಮಪಡಿಸಲು ಮೂರು ಸ್ತರದ ಪರೀಕ್ಷಾ ಪದ್ಧತಿಯಿಂದ ಸಹಕಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.