ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಸಾರಿಗೆ 6847, ಇಂಧನ 2400 ಸೇರಿ 24300 ಹುದ್ದೆಗಳ ಭರ್ತಿ: CM ಸಿದ್ದರಾಮಯ್ಯ ಘೋಷಣೆ

ಬೆಳಗಾವಿ(ಸುವರ್ಣ ಸೌಧ): ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಧಾರವಾಡ ಸೇರಿದಂತೆ ವಿವಿಧೆಡೆ ಯುವಕರು ಪ್ರತಿಭಟನೆ ನಡೆಸಿದ್ದ ಬೆನ್ನಲ್ಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತವಾಗಿ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ರಾಜ್ಯದಲ್ಲಿ 2,84,881 ಸರ್ಕಾರಿ/ಅರೆಸರ್ಕಾರಿ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಪ್ರಸ್ತುತ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ ಎಂದು ಸಿಎಂ ತಿಳಿಸಿದ್ದಾರೆ.

ಸಾರಿಗೆ 6847, ಇಂಧನ 2400, ಹಣಕಾಸು 2243, ಆರೋಗ್ಯ 1725, ಕಂದಾಯ 1350, ಕೃಷಿಯ 553, ಶಾಲಾ ಶಿಕ್ಷಣ ಇಲಾಖೆಯಲ್ಲಿ 5267, ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆ 892, ವೈದ್ಯಕೀಯ ಶಿಕ್ಷಣ ಇಲಾಖೆ 333, ನಗರಾಭಿವೃದ್ಧಿ ಇಲಾಖೆ 185, ಸಹಕಾರ ಇಲಾಖೆ 180 ಸೇರಿದಂತೆ ವಿವಿಧ ಇಲಾಖೆಗಳ 24,300 ಆರ್ಥಿಕ ಇಲಾಖೆ ಮಂಜೂರಾತಿ ನೀಡಿದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read