ನವದೆಹಲಿ: ಉದ್ಯೋಗ ಸೃಷ್ಟಿ ಗುರಿ ಹೊಂದಿರುವ ಪ್ರಧಾನಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಆಗಸ್ಟ್ 1ರಿಂದ ಜಾರಿಗೊಳಿಸಲಾಗುವುದು.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲಾಗಿತ್ತು. 99,446 ಕೋಟಿ ರೂಪಾಯಿ ವೆಚ್ಚದ ಪ್ರಧಾನಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಎರಡು ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ಇದರಲ್ಲಿ 1.92 ಕೋಟಿ ಜನ ಮೊದಲ ಬಾರಿಗೆ ಉದ್ಯೋಗ ಪಡೆಯಲಿದ್ದಾರೆ. ಇದೇ ಆಗಸ್ಟ್ 1ರಿಂದ 2027ರ ಜುಲೈ 31ರವರೆಗೆ ಉದ್ಯೋಗ ಪಡೆಯುವವರಿಗೆ ಈ ಯೋಜನೆ ಪ್ರಯೋಜನಕಾರಿಯಾಗುತ್ತದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ಮಾಹಿತಿ ನೀಡಿದೆ.
ಎರಡು ಭಾಗಗಳನ್ನು ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಹೊಂದಿದ್ದು, ಒಂದು ಉದ್ಯೋಗ ಪಡೆಯುವವರಿಗೆ ಸಂಬಂಧಿಸಿದೆ. ಮತ್ತೊಂದು ಉದ್ಯೋಗದಾತರಿಗೆ ಸಂಬಂಧಿಸಿದಾಗಿದೆ. 1 ಲಕ್ಷಕ್ಕೂ ಅಧಿಕ ವೇತನದ
ಉದ್ಯೋಗ ನೀಡುವವರಿಗೆ ಎರಡು ವರ್ಷ ಮಾಸಿಕ 3000 ರೂ. ಪ್ರೋತ್ಸಾಹ ಧನ ನೀಡಲಾಗುವುದು. ಒಂದು ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ ಪಡೆಯುವವರಿಗೆ ಪಿಂಚಣಿ ಮಾಸಿಕ ಕಂತು 15 ಸಾವಿರ ರೂ. ಭರಿಸಲಾಗುವುದು ಎನ್ನಲಾಗಿದೆ.