HomeKarnatakaಫುಟ್ ಪಾತ್ ತೆರವು ಬೆನ್ನಲ್ಲೇ ಮತ್ತೊಂದು ಕಾರ್ಯಾಚರಣೆಗೆ ಮುಂದಾದ GBA: ಕಟ್ಟಡ ತ್ಯಾಜ್ಯ, ಹಳೇ ವಾಹನಗಳ...

ಫುಟ್ ಪಾತ್ ತೆರವು ಬೆನ್ನಲ್ಲೇ ಮತ್ತೊಂದು ಕಾರ್ಯಾಚರಣೆಗೆ ಮುಂದಾದ GBA: ಕಟ್ಟಡ ತ್ಯಾಜ್ಯ, ಹಳೇ ವಾಹನಗಳ ತೆರವಿಗೆ ನಿರ್ಧಾರ

ಬೆಂಗಳೂರು: ಫುಟ್ ಪಾತ್ ತೆರವು ಕಾರ್ಯಾಚರಣೆ ಬಳಿಕ ಇದೀಗ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಮತ್ತೊಂದು ಅಭಿಯಾನಕ್ಕೆ ಸಜ್ಜಾಗಿದೆ. ಬೆಂಗಳೂರು ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿರುವ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ ವರ್ಷಗಳಿಂದ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ವಾರಿಸುದಾರರಿಲ್ಲದ ಹಳೇ ವಾಹನಗಳನ್ನು ಮುಕ್ತಿಗೊಳಿಸಲು ವಿಶೇಷ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಂಡಿದೆ.

ಒಂದು ವಾರದೊಳಗೆ ಅಧಿಕೃತವಾಗಿ ಈ ಅಭಿಯಾನಕ್ಕೆ ಚಾಲನೆ ದೊರೆಯುವ ನಿರೀಕ್ಷೆಯಿದೆ. ಈ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಜಿಬಿಎ ಹಿರಿಯ ಅಧಿಕಾರಿಗಳು ಹಾಗೂ ನಗರದ 5 ಕಾರ್ಪೊರೇಷನ್‌ಗಳ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಆಕ್ಷನ್ ಪ್ಲಾನ್ ಸಿದ್ಧಪಡಿಸಿದ್ದಾರೆ.

ಈ ಸ್ವಚ್ಛತಾ ಕಾರ್ಯಾಚರಣೆಯನ್ನು ಮುಂಬರುವ ಶುಕ್ರವಾರದಿಂದಲೇ ಆರಂಭಿಸಲು ಮೊದಲಿಗೆ ಯೋಜಿಸಲಾಗಿತ್ತಾದರೂ, ಸಾರ್ವಜನಿಕರಿಗೆ ನೋಟಿಸ್ ಜಾರಿ ಮಾಡುವುದು, ಜಪ್ತಿ ಮಾಡಿದ ತ್ಯಾಜ್ಯ ಮತ್ತು ವಾಹನಗಳ ವಿಲೇವಾರಿಗೆ ಜಾಗ ಗುರುತಿಸುವುದು ಹಾಗೂ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿರುವುದರಿಂದ ಉದ್ಘಾಟನೆಯ ಅಧಿಕೃತ ದಿನಾಂಕ ಸದ್ಯದಲ್ಲೇ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ನಮ್ಮ ಮೂಲ ಉದ್ದೇಶ ಬೆಂಗಳೂರನ್ನು ಸಂಪೂರ್ಣ ಸ್ವಚ್ಛವಾಗಿ ಕಾಣುವಂತೆ ಮಾಡುವುದು. ಒಮ್ಮೆ ಎಲ್ಲಾದರೂ ಕಟ್ಟಡದ ತ್ಯಾಜ್ಯ ಬಿದ್ದರೆ, ಅಲ್ಲಿ ಕಸದ ರಾಶಿ ಬೀಳುವುದು ಸಾಮಾನ್ಯವಾಗುತ್ತದೆ. ನಗರದ ಕೇಂದ್ರ ಭಾಗಗಳಿಗಿಂತ ಹೊರ ವಲಯಗಳಲ್ಲಿ ಈ ಸಮಸ್ಯೆ ಅತ್ಯಂತ ಗಂಭೀರವಾಗಿದೆ’ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ರಸ್ತೆಬದಿಯ ತ್ಯಾಜ್ಯ ಹಾಗೂ ಬೆಳೆದಿರುವ ಕಳೆ ಗಿಡಗಳ ತೆರವಿನ ಜೊತೆಗೆ ನಮ್ಮ ಮೆಟ್ರೋ, ಕೆ-ರೈಡ್ ಮತ್ತು ರೈಲ್ವೆ ಇಲಾಖೆಗಳಿಗೂ ಜಿಬಿಎ ಕಠಿಣ ನಿರ್ದೇಶನ ನೀಡಿದೆ. ಮೂಲಸೌಕರ್ಯ ಕಾಮಗಾರಿಗಳು ಮುಗಿದ ಮೇಲೂ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಕಬ್ಬಿಣದ ಸಾಮಗ್ರಿಗಳು ಮತ್ತು ನಿರ್ಮಾಣ ಉಪಕರಣಗಳನ್ನು ತಕ್ಷಣವೇ ತೆರವುಗೊಳಿಸಲು ಸೂಚಿಸಲಾಗಿದೆ. ಈ ಸಂಬಂಧ ರೈಲ್ವೆ ಅಧಿಕಾರಿಗಳೊಂದಿಗೆ ಶುಕ್ರವಾರ ಮತ್ತೊಂದು ಪ್ರತ್ಯೇಕ ಸಮನ್ವಯ ಸಭೆಯನ್ನು ಕರೆಯಲಾಗಿದೆ.

ನಗರದ ರಸ್ತೆಬದಿಗಳಲ್ಲಿ ಹಾಗೂ ಸಾರ್ವಜನಿಕ ಜಾಗಗಳಲ್ಲಿ ದೂಳು ಹಿಡಿದು ಬಿದ್ದಿರುವ ಒಟ್ಟು 1,518 ವಾರಸುದಾರರಿಲ್ಲದ ವಾಹನಗಳನ್ನು ಅಧಿಕಾರಿಗಳು ಈಗಾಗಲೇ ಗುರುತಿಸಿದ್ದಾರೆ. ಈ ಪೈಕಿ ಸೆಂಟ್ರಲ್ ಸಿಟಿ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 403, ಪೂರ್ವ ವಲಯದಲ್ಲಿ 92, ಉತ್ತರ ವಲಯದಲ್ಲಿ 209, ದಕ್ಷಿಣ ವಲಯದಲ್ಲಿ 383 ಮತ್ತು ಪಶ್ಚಿಮ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 399 ವಾಹನಗಳು ಪತ್ತೆಯಾಗಿದ್ದು, ಇವೆಲ್ಲವನ್ನೂ ಶೀಘ್ರದಲ್ಲೇ ಜಪ್ತಿ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular