ಬೆಂಗಳೂರು: ಸಿಲಿಕಾನ್ ಸಿಟಿಯ ಜನತೆ ಕಾತರದಿಂದ ಕಾಯುತ್ತಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮೊದಲ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮುಂದಿನ ಜೂನ್ 14 ರಿಂದ 24ರ ಅವಧಿಯಲ್ಲಿ ಯಾವುದಾದರೂ ಒಂದು ದಿನ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಅವರು ಸರ್ಕಾರಕ್ಕೆ ಮತ್ತು ಜಿಬಿಎಗೆ ಗಡುವು ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಹೈವೋಲ್ಟೇಜ್ ಸಭೆ
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆ ಸಂಬಂಧ ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯುಕ್ತರು, ಚುನಾವಣೆ ನಡೆಸಲು ಆಯೋಗ ಸಂಪೂರ್ಣ ಸನ್ನದ್ಧವಾಗಿದೆ ಎಂಬ ಸಂದೇಶ ರವಾನಿಸಿದ್ದಾರೆ.
ಆಯೋಗದ ಡೆಡ್‌ಲೈನ್ ಏನು?
ದಿನಾಂಕ ಘೋಷಣೆ: ಜೂನ್ 14 ರಿಂದ 24ರ ಒಳಗಿನ ಅವಧಿಯಲ್ಲಿ ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಬೇಕು.
ಖಡಕ್ ಸಂದೇಶ: “ಜಿಬಿಎ ನೂರು ಸಮಸ್ಯೆಗಳನ್ನು ಹೇಳಬಹುದು, ಆದರೆ ನಾವು ಯಾವುದಕ್ಕೂ ಕೇರ್ ಮಾಡಲ್ಲ. ಸುಪ್ರೀಂ ಕೋರ್ಟ್‌ಗೆ ನಾವು ಮಾಹಿತಿ ನೀಡಬೇಕಿದೆ. ಹೀಗಾಗಿ ಜೂನ್ 30ರೊಳಗೆ ಪ್ರಕ್ರಿಯೆ ಮುಗಿಯಬೇಕು” ಎಂದು ಆಯುಕ್ತರು ಎಚ್ಚರಿಸಿದ್ದಾರೆ.
ತಾಂತ್ರಿಕ ಸಿದ್ಧತೆ: ಈಗಾಗಲೇ ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಮತ್ತು ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, RO ಮತ್ತು BLOಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ.

