BIG NEWS: ‘ಗ್ರೇಟರ್ ಬೆಂಗಳೂರು’ ಯೋಜನೆಗೆ ಹೊಸ ರೂಪ: ಜನದಟ್ಟಣೆ ಕಡಿಮೆ ಮಾಡಲು ರಾಜಧಾನಿ ಸುತ್ತ 6 ಉಪನಗರ ಅಭಿವೃದ್ಧಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರದ ಸುತ್ತ 6 ಉಪನಗರಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಡಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಅಭಿವೃದ್ಧಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಅನ್ವಯ ಇದಕ್ಕೆ ಸಮ್ಮತಿ ನೀಡಲಾಗಿದೆ.

ಮೊದಲ ಹಂತದಲ್ಲಿ ರಾಮನಗರ ಜಿಲ್ಲೆ ಬಿಡದಿ ಸಮಗ್ರ ಉಪನಗರ ಅಭಿವೃದ್ಧಿ ಯೋಜನೆಗೆ ಪ್ರಾಥಮಿಕ ಪ್ರಕ್ರಿಯೆ ಆರಂಭಿಸಲು ಅನುಮೋದನೆ ನೀಡಲಾಗಿದೆ. ಬಿಡದಿ ಹೋಬಳಿಯ 9 ಗ್ರಾಮಗಳು, ಹಾರೋಹಳ್ಳಿ ಹೋಬಳಿಯ ಒಂದು ಗ್ರಾಮದಲ್ಲಿ ಬಿಡದಿ ಸಮಗ್ರ ಉಪನಗರ ಅಭಿವೃದ್ಧಿ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲು ಒಪ್ಪಿಗೆ ನೀಡಲಾಗಿದೆ.

ಸುಸ್ಥಿರ ಮೂಲ ಸೌಕರ್ಯದೊಂದಿಗೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಿ ಉದ್ಯೋಗಾವಕಾಶ ಕಲ್ಪಿಸುವುದು, ಅಂತರಾಷ್ಟ್ರೀಯ ಮಾನದಂಡಗಳ ರೀತಿ ವರ್ಕ್ ಲೀವ್ ಪ್ಲೇ ಪರಿಕಲ್ಪನೆಯೊಂದಿಗೆ ಉಪನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ಉಪನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಸ್ವಾಧೀನಪಡಿಸಿಕೊಂಡ ಭೂಮಿಗೆ ಬದಲಾಗಿ ಶೇಕಡ 35 ರಿಂದ ಶೇಕಡ 50ರಷ್ಟು ಅಭಿವೃದ್ಧಿ ಹೊಂದಿದ ಭೂಮಿಯನ್ನು ಪರಿಹಾರವಾಗಿ ನೀಡಲು ಒಪ್ಪಿಗೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read