HomeLatest Newsಗ್ರೇಟರ್ ಬೆಂಗಳೂರು, ಜಿಪಂ, ತಾಪಂ ಚುನಾವಣೆ ಶೀಘ್ರ: ಸಚಿವರಿಗೆ ಸಿಎಂ ಮಹತ್ವದ ಸೂಚನೆ

ಗ್ರೇಟರ್ ಬೆಂಗಳೂರು, ಜಿಪಂ, ತಾಪಂ ಚುನಾವಣೆ ಶೀಘ್ರ: ಸಚಿವರಿಗೆ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಯಲಿದ್ದು, ಚುನಾವಣೆಗೆ ಸಿದ್ಧತೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದ ಸಿಎಂ, ಮುಂದಿನ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಸಚಿವರಿಗೆ ನಿರ್ದೇಶನ ನೀಡಿದ್ದಾರೆ. ಹಲವು ವರ್ಷಗಳಿಂದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆದಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಿಗೂ ಚುನಾವಣೆ ವಿಳಂಬವಾಗಿದೆ. ಈ ಚುನಾವಣೆಗಳಲ್ಲಿ ಗೆಲ್ಲಬೇಕಾದ ಸವಾಲು ನಮ್ಮ ಮುಂದಿದ್ದು, ಈಗಿನಿಂದಲೇ ಸಿದ್ಧತೆ ನಡೆಸಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರದ ನಿಲುವುಗಳನ್ನು ಸಮರ್ಥಿಸಿಕೊಳ್ಳಿ. ಶ್ರದ್ಧೆಯಿಂದ ಇವೆಲ್ಲವನ್ನೂ ಮಾಡಿದರೆ ಚುನಾವಣೆ ಗೆಲ್ಲುವುದು ಕಷ್ಟವೇನಲ್ಲ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular