HomeLatest Newsಸಾಂಸ್ಕೃತಿಕ ನಗರಿ ಮೈಸೂರು ಇನ್ನು ‘ಗ್ರೇಟರ್ ಮೈಸೂರು’: ಸಿಎಂ ಸಿದ್ಧರಾಮಯ್ಯ

ಸಾಂಸ್ಕೃತಿಕ ನಗರಿ ಮೈಸೂರು ಇನ್ನು ‘ಗ್ರೇಟರ್ ಮೈಸೂರು’: ಸಿಎಂ ಸಿದ್ಧರಾಮಯ್ಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ‌.

ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿಂದು ಸಿಎಂ ಅಧಿಕಾರಿಗಳಿಗೆ ನೀಡಿದ ಪ್ರಮುಖ ಸೂಚನೆಗಳಿವು

ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ.

ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು.

ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ‌ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು.

ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು.

 ಬಡಾವಣೆಗಳ ನಿರ್ಮಾಣ ಆಗುವಾಗ ಚರಂಡಿ, ರಸ್ತೆಗಳು, ಒಳಚರಂಡಿ, ನೀರು, ವಿದ್ಯುತ್ ಸಂಪರ್ಕದ ಜೊತೆಗೆ ಪಾರ್ಕ್ ಗಳು ಕೂಡ ವ್ಯವಸ್ಥಿತವಾಗಿರಬೇಕು.

ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ ಯೋಜನೆ ಸಿದ್ಧ ಮಾಡಬೇಕು. ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಬೇಕು.

ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾ ಬದ್ಧವಾಗಿರಬೇಕು.

ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಒಂದು ಸಮಗ್ರವಾದ ಪ್ರಗತಿ ಯೋಜನೆ ಸಿದ್ಧಪಡಿಸಬೇಕಿದೆ ಎಂದು ತಿಳಿಸಿದ್ದಾರೆ.

ಸಚಿವರಾದ ಡಾ.ಹೆಚ್.ಸಿ. ಮಹಾದೇವಪ್ಪ, ಬೈರತಿ ಸುರೇಶ್ ಇತರರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular