‘ಟೋಲ್’ ನ ಮಹಿಳಾ ಸಿಬ್ಬಂದಿ ಮೇಲೆ ಅಮಾನುಷ ಹಲ್ಲೆ: ವಿಡಿಯೋ ವೈರಲ್​

ದೇಶಾದ್ಯಂತ ಟೋಲ್​ ಪ್ಲಾಜಾಗಳಲ್ಲಿ ಹಿಂಸಾಚಾರ ನಡೆಯುವ ಸಾಕಷ್ಟು ಆತಂಕಕಾರಿ ಘಟನೆಗಳು ದಿನದಿಂದ ದಿನಕ್ಕೆ ವರದಿಯಾಗುತ್ತಲೇ ಇರುತ್ತದೆ. ಇದೀಗ ಗ್ರೇಟರ್​ ನೋಯ್ಡಾದ ಟೋಲ್​ ಪ್ಲಾಜಾದಲ್ಲಿಯೂ ಇಂತದ್ದೇ ಒಂದು ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ಟೋಲ್​ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಅವಮಾನಿಸಿದ್ದು ಈ ವಿಡಿಯೋ ಇದೀಗ ವೈರಲ್​ ಆಗಿದೆ.

ಮಹಿಳೆಯೊಬ್ಬರು ಟೋಲ್​ ಬೂತ್​​ಗೆ ಪ್ರವೇಶಿಸುತ್ತಿರೋದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಟೋಲ್​ ರೂಮ್​ಗೆ ಎಂಟ್ರಿ ಕೊಟ್ಟ ಮಹಿಳೆಯು, ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾಳೆ. ಇದಾದ ಬಳಿಕ ಮಹಿಳಾ ಸಿಬ್ಬಂದಿಯ ಕಿವಿಯನ್ನು ಎಳೆದಿದ್ದು ಮಾತ್ರವಲ್ಲದೇ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾಳೆ.

ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡಿದ್ದು ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಅಧಿಕಾರಿಗಳು ಮಹಿಳೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಗ್ರೇಟರ್​ ನೋಯ್ಡಾದ ದಾದ್ರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

https://twitter.com/i/status/1680871351509217280

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read