
ವ್ಯಕ್ತಿಯೋರ್ವ ಕರೆಂಟ್ ಬಿಲ್ ಜಾಸ್ತಿ ಬಂದಿದ್ದಕ್ಕೆ ನೌಕರನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಮಲ್ಲಯ್ಯ ಗಣಾಚಾರಿ ಎಂಬ ಹೆಸ್ಕಾಂ ಮೀಟರ್ ರೀಡರ್ ಮೇಲೆ ಅಬ್ದುಲ್ ಎಂಬ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಕರೆಂಟ್ ಬಿಲ್ ಜಾಸ್ತಿ ಬಂದಿದೆ ಎಂದು ತಗಾದೆ ತೆಗೆದ ಅಬ್ದುಲ್ ನೌಕರನ ಮೇಲೆ ಇಟ್ಟಿಗೆಯಿಂದ ಹೊಡೆದು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾನೆ.
ಆರೋಪಿ ಅಬ್ದುಲ್ ನನ್ನು ಪೊಲೀಸರು ಬಂಧಿಸಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಲ್ ಕೊಡಲು ಹೋಗುವ ಮೀಟರ್ ರೀಡರ್ ಗಳ ಮೇಲೆ ಹಲ್ಲೆ ನಡೆಸಿದ ಹಲವು ಘಟನೆಗಳು ವರದಿಯಾಗುತ್ತಲೇ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವುಜನಿಕರು ಆಗ್ರಹಿಸಿದ್ದಾರೆ.
ಸಾಂದರ್ಭಿಕ ಚಿತ್ರ

