HomeLatest NewsBREAKING : ಬಾರದ ‘ಗೃಹಲಕ್ಷ್ಮಿ’ ಹಣ : ಹುಬ್ಬಳ್ಳಿಯಲ್ಲಿ ಬೃಹತ್ ಮಹಿಳಾ ಸಮಾವೇಶಕ್ಕೆ ಬಿಜೆಪಿ ನಿರ್ಧಾರ.!

BREAKING : ಬಾರದ ‘ಗೃಹಲಕ್ಷ್ಮಿ’ ಹಣ : ಹುಬ್ಬಳ್ಳಿಯಲ್ಲಿ ಬೃಹತ್ ಮಹಿಳಾ ಸಮಾವೇಶಕ್ಕೆ ಬಿಜೆಪಿ ನಿರ್ಧಾರ.!

ಬೆಂಗಳೂರು : ಸರಿಯಾದ ಸಮಯಕ್ಕೆ ‘ಗೃಹಲಕ್ಷ್ಮಿ’ಹಣ ಬಾರದ ಹಿನ್ನೆಲೆ ಹಾಗೂ ಕೆಲವು ತಿಂಗಳಿನಿಂದ ಬಾಕಿ ಉಳಿದಿರುವ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದೆ.

ಹುಬ್ಬಳ್ಳಿಯಲ್ಲಿ ಬೃಹತ್ ಮಹಿಳಾ ಮಹಿಳಾ ಸಮಾವೇಶಕ್ಕೆ ಬಿಜೆಪಿ ನಿರ್ಧರಿಸಿದ್ದು, ಫೆಬ್ರವರಿ ಮೊದಲ ಅಥವಾ 2 ನೇ ವಾರದಲ್ಲಿ ಸಮಾವೇಶ ನಡೆಸಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ಮಹಿಳೆಯರನ್ನು ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ.

ಗೃಹಲಕ್ಷ್ಮಿಯರನ್ನು ಕಣಕ್ಕಿಳಿಸುವ ಮೂಲಕ ಮಹಿಳಾ ಸಮಾವೇಶದ ಮೂಲಕ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಸರ್ಕಾರ ಒತ್ತಾಯಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರ ಆಕ್ರೋಶ
3 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ, ಇದನ್ನ ನಂಬಿಕೊಂಡು ನಾವು ಜೀವನ ಸಾಗಿಸುತ್ತಿದ್ದೇವೆ. ಹಣ ಬಾರದೇ 3 ತಿಂಗಳಾಯಿತು ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು, 3 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ , ಹಣ ಬರದೇ ಸಾಕಷ್ಟು ತೊಂದರೆಯಾಗಿದೆ.. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.ಆದರೆ ನಮಗೆ 3 ತಿಂಗಳಿನಿಂದ ಹಣ ಬರ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular