HomeKarnatakaGrihalakshmi Scheme : ಇಂದಿನಿಂದ `ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆ ಆರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

Grihalakshmi Scheme : ಇಂದಿನಿಂದ `ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆ ಆರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟರ್ ನಲ್ಲಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ನಾಡಿನ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ನೆಮ್ಮದಿಯ ನಾಳೆಗಳನ್ನು ಕಲ್ಪಿಸಿಕೊಡುವ ಉದ್ದೇಶದೊಂದಿಗೆ ನಾವು ಜಾರಿಗೊಳಿಸಿರುವ ಮಹತ್ವಾಕಾಂಕ್ಷೆಯ “ಗೃಹಲಕ್ಷ್ಮಿ” ಯೋಜನೆಯ ಅರ್ಜಿ ಸಲ್ಲಿಕೆಯು ಇಂದಿನಿಂದ ಆರಂಭಗೊಂಡಿದ್ದು, ಅರ್ಹ ಕುಟುಂಬಗಳ ಯಜಮಾನಿಯರು ತಪ್ಪದೇ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬೇಕೆಂದು ಮನವಿ ಮಾಡುತ್ತೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಉಚಿತವಾಗಿ ನೋಂದಾಯಿಸಿ

ಅಥವಾ

* ಅಧಿಕೃತ ‘ಪ್ರಜಾ ಪ್ರತಿನಿಧಿ’ ಸ್ವಯಂ ಸೇವಕರು ನಿಮ್ಮ ಮನೆ ಬಾಗಿಲಲ್ಲೇ ಉಚಿತವಾಗಿ ನೋಂದಣಿ ಮಾಡಲಿದ್ದಾರೆ

ಕನಿಷ್ಠ ನಿಬಂಧನೆ, ಸರಳ ಅರ್ಜಿ ಪ್ರಕ್ರಿಯೆಯ ಮೂಲಕ ಅತಿ ಹೆಚ್ಚು ಜನರಿಗೆ ಯೋಜನೆಯ ಲಾಭ ತಲುಪಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಈ ಕಾರ್ಯಕ್ರಮ ಯಶಸ್ವಿಯಾಗಲು ನಿಮ್ಮೆಲ್ಲರ ಸಹಕಾರವಿರಲಿ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular