HomeKarnatakaGrihalakshmi Scheme : ಮನೆಯ ಯಜಮಾನಿಯರ ಖಾತೆಗೆ ಈ ದಿನ ಬರಲಿದೆ 2,000 ರೂ.ಹಣ!

Grihalakshmi Scheme : ಮನೆಯ ಯಜಮಾನಿಯರ ಖಾತೆಗೆ ಈ ದಿನ ಬರಲಿದೆ 2,000 ರೂ.ಹಣ!

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 16 ಆಗಸ್ಟ್ 2023 ರಿಂದ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ಆರ್ಥಿಕ ನೆರವು ನೀಡಲಿದೆ.

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಎರಡು ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಆಗಸ್ಟ್ 16ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಮತ್ತು ಕಲಬುರಗಿಯಲ್ಲಿ ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular