HomeKarnatakaGruhalakshmi Scheme: : ಯಜಮಾನಿಯರಿಗೆ ಗುಡ್ ನ್ಯೂಸ್ : ಆ.30 ರಂದು ಖಾತೆಗೆ 2,000 ರೂ....

Gruhalakshmi Scheme: : ಯಜಮಾನಿಯರಿಗೆ ಗುಡ್ ನ್ಯೂಸ್ : ಆ.30 ರಂದು ಖಾತೆಗೆ 2,000 ರೂ. ಹಣ ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ  ಚಾಲನೆ ನೀಡಲಾಗುವುದು, ಅಂದೇ ಯಜಮಾನಿಯರ ಖಾತೆಗೆ 2,000 ರೂ. ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಕೂಡ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ದಿನಾಂಕ ಹೊಂದಾಣಿಕೆ ಆಗುತ್ತಿರಲಿಲ್ಲ. ಹೀಗಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ನಿರ್ಧರಿಸಲಾಗಿತ್ತು. ಸ್ಥಳ ಕೂಡ ನೋಡಲಾಗಿತ್ತು. ಆದರೆ ಆಗಸ್ಟ್ 30 ರಂದು ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಅಂದು ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಯೋಜನೆಗೆ ಚಾಲನೆ ನೀಡಲಾಗುವುದು. ರಾಹುಲ್ ಗಾಂಧಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular