HomeKarnataka`ಗೃಹಲಕ್ಷ್ಮೀ ಯೋಜನೆ' ಚಾಲನೆಗೆ ಭರ್ಜರಿ ಸಿದ್ಧತೆ : ನಾಡಿದ್ದೇ `ಯಜಮಾನಿ'ಯರ ಖಾತೆಗೆ 2,000 ರೂ.ಜಮಾ

`ಗೃಹಲಕ್ಷ್ಮೀ ಯೋಜನೆ’ ಚಾಲನೆಗೆ ಭರ್ಜರಿ ಸಿದ್ಧತೆ : ನಾಡಿದ್ದೇ `ಯಜಮಾನಿ’ಯರ ಖಾತೆಗೆ 2,000 ರೂ.ಜಮಾ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.

ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು, ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. 11 ಸಾವಿರ ಕಡೆ ನೇರ ಪ್ರಸಾರ ಇರಲಿದೆ. ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್ 30 ರಂದು ಮೈಸೂರಿನಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು  ಹೇಳಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರಚೀಟಿಗಳಲ್ಲಿ ನಮೂದಾಗಿರುವ ಮನೆಯ ಯಜಮಾನಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ  ನೇರ ನಗದು ವರ್ಗಾವಣೆ ಅಥವಾ ಆಧಾರ್ ಲಿಂಕ್ ಆಗದಿರುವ ಬ್ಯಾಂಕ್ ಖಾತೆಗೆ ಆರ್‍ಟಿಜಿಎಸ್ ಮೂಲಕ ಮಾಸಿಕ ರೂ.2,000/- ವಿತರಿಸಲಾಗುತ್ತದೆ. ಆದರೆ ಕುಟುಂಬದ ಯಜಮಾನಿ, ಗಂಡ ತೆರಿಗೆ ಪಾವತಿಸುತ್ತ್ತಿದ್ದರೆ ಈ ಯೋಜನೆಯ ಲಾಭ ಪಡೆಯಲು ಬರುವುದಿಲ್ಲ. ಫಲಾನುಭವಿಗಳ ನೋಂದಣಿಯು ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಗ್ರಾಮದ ಪ್ರಜಾಪ್ರತಿನಿಧಿಗಳನ್ನು ನೇಮಿಸಿದೆ. ಪ್ರಜಾಪ್ರತಿನಿಧಿಗಳು ನೋಂದಣಿಗಾಗಿ ಮನೆ ಮನೆಗಳಿಗೆ ಭೇಟಿ ನೀಡುತ್ತಾರೆ. ಅವರ ಸಹಾಯದಿಂದಲೂ ನೋಂದಾಯಿಸಿಕೊಳ್ಳಬಹುದು.

 ಈಗಾಗಲೇ ಮಹಿಳಾ ಫಲಾನುಭವಿಗಳನ್ನು ನೋಂದಣಿ ಮಾಡಿಸಿಕೊಂಡಿದ್ದು, ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆಗಳು ಅಥವಾ ಶಾಲಾ ಆವರಣಗಳನ್ನು ಹೊರತುಪಡಿಸಿ, ಸಮುದಾಯ ಭವನ, ಚೌಲ್ಟ್ರಿಗಳು ಹಾಗೂ ಗ್ರಾಮೀಣ ಭಾಗಗಳಲ್ಲಿರುವ ಸಭಾಂಗಣಗಳಲ್ಲಿ ಟಿವಿ ಹಾಗೂ ಎಲ್‍ಇಡಿ ಪರದೆ ಮೂಲಕ ಈ ಕಾರ್ಯಕ್ರಮವನ್ನು ನೇರವಾಗಿ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ವೀಕ್ಷಣೆ ಮಾಡಲು ಅಗತ್ಯ ಕ್ರಮವಹಿಸಬೇಕು.  ಇದಕ್ಕಾಗಿ ಅಗತ್ಯ ಇಂಟರ್‍ನೆಟ್ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular