HomeKarnatakaBIG NEWS: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಚರ್ಚೆ

BIG NEWS: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಚರ್ಚೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕೆಂಬ ಚರ್ಚೆ ಜೋರಾಗಿಯೇ ನಡೆದಿದೆ.

ಆಡಳಿತ ಪಕ್ಷದ ಶಾಸಕರು, ಮುಖಂಡರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಟೀಕಿಸಿದ ಬಿಜೆಪಿ ಪರವಾಗಿ ಜನ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹೇಳಿದ್ದಾರೆ.

ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ ಎಂಬುದನ್ನು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಗ್ಯಾರಂಟಿ ವಿರುದ್ಧ ಮಾತನಾಡುತ್ತಿದ್ದ ಬಿಜೆಪಿಯವರನ್ನು ಜನ ಬೆಂಬಲಿಸಿದ್ದಾರೆ. ಜನರಿಗೆ ನಮ್ಮ ಗ್ಯಾರಂಟಿ ಇಷ್ಟವಾಗಿಲ್ಲ. ಹೀಗಾಗಿ ಗ್ಯಾರಂಟಿ ನಿಲ್ಲಿಸುವುದೇ ಒಳ್ಳೆಯದು ಎಂದು ಅವರು ಹೇಳಿದ್ದು, ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮರು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಡಳಿತ ಪಕ್ಷದ ಅನೇಕ ಶಾಸಕರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತದ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ, ಸಿಎಂ ಸೇರಿದಂತೆ ಅನೇಕರು ಗ್ಯಾರಂಟಿ ಯೋಜನೆ ಮುಂದುವರೆಸುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular