HomeLatest Newsಗ್ರೂಪ್ ಸಿ ಹುದ್ದೆ ನೇಮಕಾತಿ ಪರೀಕ್ಷೆ: 6 ಕೃಪಾಂಕ ಘೋಷಣೆ: 22 ಪ್ರಶ್ನೆಗಳ ಉತ್ತರದಲ್ಲಿ ಮಾರ್ಪಾಡು

ಗ್ರೂಪ್ ಸಿ ಹುದ್ದೆ ನೇಮಕಾತಿ ಪರೀಕ್ಷೆ: 6 ಕೃಪಾಂಕ ಘೋಷಣೆ: 22 ಪ್ರಶ್ನೆಗಳ ಉತ್ತರದಲ್ಲಿ ಮಾರ್ಪಾಡು

ಬೆಂಗಳೂರು: ಗ್ರೂಪ್ ಸಿ ಹುದ್ದೆ ಪರೀಕ್ಷೆಗೆ 6 ಕೃಪಾಂಕಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಘೋಷಿಸಿದೆ. 22 ಪ್ರಶ್ನೆಗಳ ಉತ್ತರದಲ್ಲಿ ಮಾರ್ಪಾಡು ಮಾಡಲಾಗಿದೆ.

ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ಸರಿ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದೆ. ಇದರಲ್ಲಿ ಸಾಮಾನ್ಯ ಜ್ಞಾನ ಪತ್ರಿಕೆ -1ರಲ್ಲಿ(ವಿಷಯ ಸಂಕೇತ 656) ಮೂರು ಕೃಪಾಂಕ ನೀಡಲಾಗಿದೆ. ಇದು ಸೇರಿ ಒಟ್ಟಾರೆ 16 ಪ್ರಶ್ನೆಗಳ ಉತ್ತರಗಳಲ್ಲಿ ಬದಲಾವಣೆ ಮಾಡಿದಂತಾಗಿದೆ.

ಇದರೊಂದಿಗೆ ಮೂರು ಪ್ರಶ್ನೆಗಳಿಗೆ ಪರ್ಯಾಯ ಉತ್ತರ ನೀಡಲಾಗಿದೆ. ವಿಷಯಾಧಾರಿತ ನಿರ್ದಿಷ್ಟ ಪತ್ರಿಕೆ -2ರಲ್ಲಿ(ವಿಷಯ ಸಂಕೇತ 657) ಮೂರು ಕೃಪಾಂಕ ನೀಡಲಾಗಿದ್ದು, ಮೂರು ಉತ್ತರಗಳನ್ನು ಬದಲಾಯಿಸಲಾಗಿದೆ. ಎರಡೂ ಪತ್ರಿಕೆಗಳಿಂದ ಒಟ್ಟಾರೆ 22 ಉತ್ತರಗಳನ್ನು ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಮನವಿ, ಆಕ್ಷೇಪಣೆ ಪರಿಗಣಿಸುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular