HomeAgricultureತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ಸ್ಥಿರೀಕರಣ ಯೋಜನೆಯಡಿ ತೊಗರಿ ಖರೀದಿಗೆ ನೋಂದಣಿ ಆರಂಭ

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ಸ್ಥಿರೀಕರಣ ಯೋಜನೆಯಡಿ ತೊಗರಿ ಖರೀದಿಗೆ ನೋಂದಣಿ ಆರಂಭ

ಕಲಬುರಗಿ: ಪ್ರಸಕ್ತ 2023-24ನೇ ಸಾಲಿನ ಬೆಲೆ ಸ್ಥಿರೀಕರಣ ಯೋಜನೆಯಡಿ ರೈತರಿಂದ ತೊಗರಿ ಕೃಷಿ ಉತ್ಪನ್ನ ಖರೀದಿಗೆ ಜನವರಿ 18 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಬುಧವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸಹಕಾರ ಮಾರಾಟ ಮಂಡಳ ನಿಯಮಿತ ಕಲಬುರಗಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ತೊಗರಿ ಖರೀದಿಗೆ ನೋಡಲ್ ಏಜೆನ್ಸಿಯಾಗಿ ನೇಮಿಸಿಲಾಗಿದೆ ಎಂದಿದ್ದಾರೆ.

ಜಿಲ್ಲೆಯ 185 ಪ್ರಾಥಮಿಕ ಕೃಷಿ ಉತ್ಪನ್ನ ಸಹಕಾರ ಸಂಘಗಳು ಅಥವಾ ರೈತ ಉತ್ಪಾದಕ ಸಂಘಗಳಲ್ಲಿ ಜನವರಿ 18 ರಿಂದ 27ರ ವರೆಗೆ ರೈತರು ತೊಗರಿ ಮಾರಾಟ ಮಾಡಲು ಹೆಸರು ನೋಂದಾಯಿಸಿಕೊಳ್ಳಬೇಕು. ಜನವರಿ 20 ರಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಲೆ ಸ್ಥಿರೀಕರಣ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ದದ ತೊಗರಿಯನ್ನು ಮಾರುಕಟ್ಟೆಯ ದರಕ್ಕೆ ಅಂದರೆ ಕೇಂದ್ರ ಸರ್ಕಾರದ AG.Mark Portal ನಿಂದ Minimum Assured Procurement Price(MAPP) ಅಥವಾ Dynamic Buffer Procurement Price(DBPP) ಈ ಎರಡು ದರಗಳನ್ನು ಪಡೆದುಕೊಂಡು ಇವುಗಳಲ್ಲಿ ಯಾವ ಬೆಲೆ ಹೆಚ್ಚು ಇದೆಯೋ ಅದನ್ನು ರೈತರಿಗೆ ಪಾವತಿಸಿ ತೊಗರಿ ಖರೀದಿಸಲಾಗುತ್ತದೆ.

ಕಲಬುರಗಿ ಜಿಲ್ಲೆಯ ರೈತ ಭಾಂದವರು ಇದರ ಸದುಪಯೋಗ ಪಡೆಯಬೇಕು. ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ರೈತ ಉತ್ಪಾದಕ ಸಂಘಗಳಿಗೆ ಭೇಟಿ ನೀಡಿ ತಾವು ಬೆಳೆದ ತೊಗರಿ ಮಾರಾಟಕ್ಕೆ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular