ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಗ್ಯಾರಂಟಿ ಮಾದರಿಯಲ್ಲಿ ‘ಗೃಹ ಆರೋಗ್ಯ’ ಹೊಸ ಯೋಜನೆ: ಮನೆ ಬಾಗಿಲಿಗೆ ವೈದ್ಯರು

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿ ಹೊಸ ಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧಿ ಒದಗಿಸುವ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.

ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಇದನ್ನು ಜಾರಿಗೊಳಿಸಲಿದ್ದು, ನಂತರ ಉಳಿದ ಜಿಲ್ಲೆಗಳಲ್ಲಿಯೂ ವಿಸ್ತರಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಯೋಜನೆ ರೂಪಿಸಲಾಗಿದೆ. ಸಮಸ್ಯೆ ಉಲ್ಬಣಿಸಿದ ನಂತರ ಚಿಕಿತ್ಸೆ ನೀಡುವ ಬದಲಿಗೆ ರೋಗ ಕಾಣಿಸಿಕೊಳ್ಳುವ ಪೂರ್ವದಲ್ಲೇ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಉದ್ದೇಶ ಹೊಂದಲಾಗಿದೆ.

ಗೃಹ ಆರೋಗ್ಯ ಯೋಜನೆ ಅಡಿ ಆರೋಗ್ಯ ಸಿಬ್ಬಂದಿ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬ ಸದಸ್ಯರನ್ನು ತಪಾಸಣೆ ನಡೆಸಲಿದ್ದಾರೆ. ಬಿಪಿ, ಮಧುಮೇಹ ಸೇರಿದಂತೆ ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಲಿದ್ದು, ಸಂಕೀರ್ಣ ಕಾಯ್ದೆಗಳನ್ನು ಪತ್ತೆ ಹಚ್ಚಿ ಗಂಭೀರ ಸಮಸ್ಯೆ ಇದ್ದವರೆನ್ನು ಗುರುತಿಸಿ ಸೂಕ್ತ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read