HomeKarnatakaGruha Jyoti Scheme : ಆಗಸ್ಟ್ 5 ರಂದು `ಗೃಹಜ್ಯೋತಿ’ ಯೋಜನೆಗೆ ಚಾಲನೆ : ಸಚಿವ...

Gruha Jyoti Scheme : ಆಗಸ್ಟ್ 5 ರಂದು `ಗೃಹಜ್ಯೋತಿ’ ಯೋಜನೆಗೆ ಚಾಲನೆ : ಸಚಿವ ಕೆ.ಜೆ ಜಾರ್ಜ್

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳು 200 ಯುನಿಟ್ ಉಚಿತವಾಗಿ ವಿದ್ಯುತ್ ಸಿಗಲಿದ್ದು, ಆಗಸ್ಟ್ 5 ಕ್ಕೆ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ 1 ಕೋಟಿ ನಲವತ್ತು ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಅಂತಿಮ ಗಡುವುನೊಳಗೆ ನೋಂದಣಿ ಮಾಡದಿದ್ದರೆ ಎಂದಿನಂತೆ ರೆಗ್ಯೂಲರ್ ಬಿಲ್ ಬರುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular