HomeKarnatakaGruha Jyoti Scheme : ಆ.5ರಂದು ಕಲಬುರಗಿಯಲ್ಲಿ 'ಗೃಹಜ್ಯೋತಿ' ಯೋಜನೆಗೆ ಅಧಿಕೃತ ಚಾಲನೆ : ಸಚಿವ...

Gruha Jyoti Scheme : ಆ.5ರಂದು ಕಲಬುರಗಿಯಲ್ಲಿ ‘ಗೃಹಜ್ಯೋತಿ’ ಯೋಜನೆಗೆ ಅಧಿಕೃತ ಚಾಲನೆ : ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ಸಿಗಲಿದೆ. ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಸೇರಿ ಹಲವರು ಭಾಗಿಯಾಗಲಿದ್ದಾರೆ ಎಂದು ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ಸಿಗಲಿದೆ. ಈಗಾಗಲೇ ಗೃಹಜ್ಯೋತಿ ಯೋಜನೆಗೆ 1.43 ಕೋಟಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. 200 ಯೂನಿಟ್ಯೊಳಗೆ ವಿದ್ಯುತ್ ಬಳಸಿದ್ರೆ ಬಿಲ್ ಪಾವತಿಸುವಂತಿಲ್ಲ. ಒಂದು ವರ್ಷದ ಸರಾಸರಿ ವಿದ್ಯುತ್ ಬಿಲ್ ಪರಿಗಣಿಸಿ ಉಚಿತ ವಿದ್ಯುತ್ ನೀಡಲಾಗುತ್ತೆ. 200 ಯೂನಿಟ್ನಿಂತ ಹೆಚ್ಚು ಬಳಸಿದರೆ ಅರ್ಜಿ ರಿಜೆಕ್ಟ್ ಆಗಲಿದೆ ಎಂದರು.

ಇಂದಿನಿಂದ ಸಿಗಲಿದೆ `ಶೂನ್ಯ ವಿದ್ಯುತ್ ಬಿಲ್s

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ ಗ್ರಾಹಕರಿಗೆ ಇಂದಿನಿಂದ ಶೂನ್ಯ ಬಿಲ್ ವಿತರಣೆ ಶುರುವಾಗಲಿದೆ. ಜುಲೈ 1 ರಿಂದ ಬಳಕೆಯಾದ ಗೃಹಬಳಕೆ ವಿದ್ಯುತ್ ಗೆ ಗ್ರಾಹಕರು ಕಳೆದ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ ಆಧರಿಸಿ ಅದಕ್ಕಿಂತ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಉಚಿತವಾಗಿ ಪಡೆದುಕೊಳ್ಳಬಹುದು. ಜುಲೈ 27ರೊಳಗೆ ನೋಂದಾಯಿಸಿದ ಗ್ರಾಹಕರಿಗೆ ಈ ಸೌಲಭ್ಯ ಸಿಗಲಿದೆ.

ಜೂನ್ ತಿಂಗಳಿನ ವಿದ್ಯುತ್ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿದ್ದರೆ ಹೆಚ್ಚುವರಿ ದಿನಗಳ ಹಣ ನಿಮಗೆ ಮರುಪಾವತಿಯಾಗಲಿದೆ ಎಂದರು. ಜೂನ್ ತಿಂಗಳ ವಿದ್ಯುತ್ ಬಿಲ್ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular