HomeKarnatakaಕಡಿಮೆ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಹೆಚ್ಚುವರಿ 10 ಯುನಿಟ್ ಉಚಿತ, 58 ಯುನಿಟ್ ವರೆಗೆ...

ಕಡಿಮೆ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಹೆಚ್ಚುವರಿ 10 ಯುನಿಟ್ ಉಚಿತ, 58 ಯುನಿಟ್ ವರೆಗೆ ಫ್ರೀ

ಉಡುಪಿ: ಗೃಹಜ್ಯೋತಿ ಯೋಜನೆಯಡಿ ಕಡಿಮೆ ವಿದ್ಯುತ್ ಬಳಕೆದಾರರಿಗೆ ಹೆಚ್ಚುವರಿಯಾಗಿ 10 ಯುನಿಟ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ.

ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಉಡುಪಿ ಜಾಮಿಯಾ ಮಸೀದಿ ಆವರಣದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಜ್ಯೋತಿ ಯೋಜನೆಯಡಿ ಕಡಿಮೆ ವಿದ್ಯುತ್ ಬಳಸುವವರಿಗೆ ಯಾವುದೇ ಲಾಭ ಸಿಗುತ್ತಿಲ್ಲ. 15 -20 ಯುನಿಟ್ ವಿದ್ಯುತ್ ಬಳಕೆದಾರರಿಗೆ ಶೇಕಡ 10ರಷ್ಟು ಅಂದರೆ 1.5 ಯುನಿಟ್ ಹೆಚ್ಚುವರಿ ವಿದ್ಯುತ್ ಮಾತ್ರ ಸಿಗುತ್ತಿದೆ. ಹೀಗಾಗಿ 48 ಯುನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇಕಡ 10ರ ಬದಲು 10 ಯುನಿಟ್ ಕೊಡಲು ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದಾಗಿ 58 ಯುನಿಟ್ ವರೆಗೆ ಹಣ ಪಾವತಿಸಬೇಕಿಲ್ಲ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular