Gruha Lakshmi Scheme : ಆಗಸ್ಟ್ 18 ರಂದು ‘ಯಜಮಾನಿ’ ಖಾತೆಗೆ 2 ಸಾವಿರ ಹಣ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಚಿಕ್ಕಮಗಳೂರು : ಆಗಸ್ಟ್ 18 ರಂದು ‘ಯಜಮಾನಿ’ ಮಹಿಳೆಯ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಚಿಕ್ಕಮಗಳೂರಿನ ಗೌರಿಗದ್ದೆಗೆ ಭೇಟಿ ನೀಡಿದ ಸಚಿವೆ ಚಂಡಿಕಾಯಾಗದಲ್ಲಿ ಭಾಗಿಯಾಗಿ ನಂತರ ಮಾತನಾಡಿದರು. ಮಹಿಳೆಯರಿಗೆ 2000 ರೂಪಾಯಿ ಮಾಸಿಕ ಸಹಾಯಧನ ಯೋಜನೆ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಕೊಂಚ ವಿಳಂಬವಾಗುತ್ತಿದೆ. ಯೋಜನೆಯಲ್ಲಿ ಕೆಲವೊಂದು ಬದಲಾವಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಿರುವುದರಿಂದ ಹಾಗೂ ಗೃಹಲಕ್ಷ್ಮಿ ಯೋಜನೆಗಾಗಿಯೇ ಪ್ರತ್ಯೇಕ ಆಪ್ ಸಿದ್ಧಪಡಿಸಲು ಹೇಳಿದ್ದೇವೆ. ಹಾಗಾಗಿ ಅರ್ಜಿ ಸಲ್ಲಿಕೆಗೆ ಸ್ವಲ್ಪ ವಿಳಂಬವಾಗುತ್ತಿದೆ ಎಂದರು.

ಯೋಜನೆ ಜನರಿಗೆ ಸರಳವಾಗಿ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಆಗಸ್ಟ್ 17 ಅಥವಾ 18ಕ್ಕೆ ಫಲಾನುಭವಿಗಳ ಖಾತೆಗೆ ಖಂಡಿತವಾಗಿ ಯೋಜನೆಯ ಹಣವನ್ನು ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು. ಜನರಿಗೆ ಯೋಜನೆ ಸರಳವಾಗಿ ಸಿಗಬೇಕು ಎನ್ನುವ ಕಾರಣಕ್ಕೆ ಅರ್ಜಿಯಲ್ಲಿ ಕೆಲವು ಬದಲಾವಣೆಯನ್ನು ಮಾಡುವುದಕ್ಕೆ ಸೂಚಿಸಲಾಗಿದೆ. ಹೀಗಾಗಿ ವಿಳಂಬವಾಗುತ್ತಿದೆ ಎಂದು ಹೇಳಿದರು.

ಮಳೆಗಾಗಿ ಅವಧೂತ ವಿನಯ್ ಗುರೂಜಿ ಅವರು ನಡೆಸುತ್ತಿರುವ ಚಂಡಿಕಾಯಾಗ(Chandikayaga) ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಭಾಗಿಯಾಗಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗೌರಿಗದ್ದೆ ಆಶ್ರಮದಲ್ಲಿ ಮಳೆಗಾಗಿ ವಿನಯ್ ಗುರೂಜಿ ಅವರು ಚಂಡಿಕಾಯಾಗ ಹಮ್ಮಿಕೊಂಡಿದ್ದು, ಚಂಡಿಕಾ ಯಾಗದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದಾರೆ. ವಿನಯ್ ಗುರೂಜಿ ಮಳೆಗಾಗಿ ಚಂಡಿಕಾಯಾಗ ಸಂಕಲ್ಪ ಮಾಡಿದ್ದು, ಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವ ಡಿ.ಸುಧಾಕರ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read