Gruha Lakshmi Scheme : ‘ಬಿಪಿಎಲ್’, ‘ಎಪಿಎಲ್’ ಕಾರ್ಡ್ ದಾರರಿಗೆ ಗೃಹಲಕ್ಷ್ಮೀ ಯೋಜನೆ ಅನ್ವಯ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಗೃಹಲಕ್ಷ್ಮೀ ಯೋಜನೆ (Gruhalakshmi Yojana) ಅನ್ವಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಗೃಹಲಕ್ಷ್ಮೀ ಯೋಜನೆ ಅನ್ವಯವಾಗಲಿದೆ, GST ನೋಂದಣಿದಾರರಿಗೆ ಯೋಜನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರಿಗೂ 200 ಯೂನಿಟ್ (200 units of free electricity) ಉಚಿತ ವಿದ್ಯುತ್ ನೀಡಲಾಗುತ್ತೆ ಎಂದು ತಿಳಿಸಿದರು.

ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿ‌ ಎಸ್ ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು.

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ (Power Projec)t ಬಾಡಿಗೆದಾರರಿಗೂ ಅನ್ವಯಿಸಲಿದೆ, ಈ ಸಂಬಂಧ ಅಧಿಕಾರಿಗಳಿಗೆ ಸೂಕ್ತ ಸಲಹೆ ನೀಡಲಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read