HomeKarnatakaGruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ನಿಮ್ಮ...

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ನಿಮ್ಮ ಬದಲು ಪತಿ-ಮಕ್ಕಳು ಹೋಗಬಹುದು

ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.ಗೃಹಲಕ್ಷ್ಮಿ’ ಗೆ ಅರ್ಜಿ ಹಾಕಲು ಮನೆ ಯಜಮಾನಿಯೇ ಹೋಗಬೇಕಿಲ್ಲ, ಪತಿ ಅಥವಾ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.ಗ್ರಾಮ ಒನ್, ಕರ್ನಾಟಕ, ಒನ್ ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಾ ಗಳಲ್ಲಿ SMS ಇಲ್ಲದೆ ಇದ್ದರೂ ಯಾರು ಬೇಕಾದರೂ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

ಆದರೆ ಹೋಗುವಾಗ ಕುಟುಂಬದ ಪಡಿತರ ಚೀಟಿ, ಯಜಮಾನಿ ಮಹಿಳೆಯ ಆಧಾರ್ ಕಾರ್ಡ್, ಅವರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ , ಮಹಿಳೆಯ ಬ್ಯಾಂಕ್ ಪಾಸ್ ಬುಕ್ ಅನ್ನು ತಪ್ಪದೆ ತೆಗೆದುಕೊಂಡು ಹೋಗಬೇಕು. ಮಹಿಳೆ ಆಧಾರ್ ಕಾರ್ಡ್ ನಲ್ಲಿ ಇರುವ ಫೋನ್ ನಂಬರ್ ಮೊಬೈಲ್ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಅದರಿಂದ ಒಟಿಪಿ ಬರುತ್ತದೆ.

ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೋಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೊಂದಣಿ ಕೇಂದ್ರದ ವಿವರಗಳನ್ನು ಎಸ್.ಎಂ.ಎಸ್. ಮೂಲಕ ತಿಳಿಸಲಾಗುತ್ತದೆ.ಮೊದಲಿಗೆ ಹೆಡ್ ಆಫ್ ದ ಫ್ಯಾಮಿಲಿ ಆಧಾರ್ ಕಾರ್ಡ್ ಅಲ್ಲಿ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ 8147500500 ಈ ಮೊಬೈಲ್ ಸಂಖ್ಯೆಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು SMS ಮೂಲಕ ಕಳುಹಿಸಬೇಕು.SMS ಕಳುಹಿಸಿದ ಕೆಲವೇ ಕ್ಷಣಗಳಲ್ಲಿ ನಿಮಗೆ VM-SEVSIN ಕರ್ನಾಟಕ ಸರ್ಕಾರದ ವತಿಯಿಂದ ನೀವು ಯಾವ ದಿನಾಂಕದಲ್ಲಿ ಯಾವ ಸಮಯಕ್ಕೆ ಯಾವ ಸ್ಥಳದಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂಬ ಮೆಸೇಜ್ ಬರುತ್ತದೆ. ಒಂದು ವೇಳೆ ಮೆಸೇಜ್ ಬಾರದಿದ್ದರೆ ಅದು ಸರ್ವರ್ ಸಮಸ್ಯೆ ಆಗಿರುತ್ತದೆ, ಆದ್ದರಿಂದ ಮತ್ತೆ ನೀವು ಸಂದೇಶ ಕಳುಹಿಸಬೇಕು. ನಿಮಗೆ SMS ಮೂಲಕ ಯಾವ ಗ್ರಾಮದಲ್ಲಿ ಯಾವ ಕೇಂದ್ರದಲ್ಲಿ ಯಾವ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಬರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರು ಅರ್ಜಿ ಸಲ್ಲಿಸಲು ಇನ್ನು ಮುಂದೆ ಸ್ಲಾಟ್ ಬುಕ್ಕಿಂಗ್ ಗಾಗಿ SMS ಅನ್ನು ಕಾಯುವ ಅವಶ್ಯಕತೆ ಇಲ್ಲ. ಬದಲಾಗಿ ನೇರವಾಗಿಯೇ ಹೋಗಿ ಫಲಾನುಭವಿಗಳು ತಮಗೆ ಹತ್ತಿರದಲ್ಲಿರುವ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸೇವಾಸಿಂಧು ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ. ನೀವು ನಿಮ್ಮ ಒಟಿಪಿ ಬರುವ ಮೊಬೈಲ್ ತೆಗೆದುಕೊಂಡು ಹೋಗಿ ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಬಹುದು. ನೇರವಾಗಿ ಪೂರಕ ದಾಖಲೆಗಳ ಜೊತೆ ಹೋಗಿ ಇಂದಿನಿಂದಲೇ ಈ ಮೇಲೆ ತಿಳಿಸಿದ ಸೇವಾಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದುನಿಮ್ಮ ಮೆಸೇಜ್ ಗೆ ರಿಪ್ಲೈ ಬಂದಿಲ್ಲ ಎಂದರೆ ತಾಂತ್ರಿಕ ಸಮಸ್ಯೆಯಿಂದ ಹೀಗಾಗಿರಬಹುದು. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ವೆಬ್ಸೈಟ್ https://sevasindhugs.karnataka.gov.in/ ಗೆ ಭೇಟಿ ನೀಡಿ ನಿಮ್ಮ ಪಡಿತರ ಚೀಟಿ ಸಂಖ್ಯೆ ಹಾಗೂ ಕ್ಯಾಪ್ಚಾ ನಮೂದಿಸಿ ನೀವು ಅರ್ಜಿ ಸಲ್ಲಿಸುವ ವೇಳಾಪಟ್ಟಿ ಚೆಕ್ ಮಾಡಿಕೊಳ್ಳಬಹುದು

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular