HomeKarnatakaBig Update: ಗೃಹಲಕ್ಷ್ಮಿ ಫಲಾನುಭವಿಗೆ ತಕ್ಷಣದಿಂದಲೇ ಹಣ ಬಿಡುಗಡೆ ಇಲ್ಲ

Big Update: ಗೃಹಲಕ್ಷ್ಮಿ ಫಲಾನುಭವಿಗೆ ತಕ್ಷಣದಿಂದಲೇ ಹಣ ಬಿಡುಗಡೆ ಇಲ್ಲ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮರಣ ಹೊಂದಿದ್ದರೆ ತಕ್ಷಣದಿಂದಲೇ ಫಲಾನುಭವಿ ಖಾತೆಗೆ 2,000 ರೂ. ಹಣ ಬಿಡುಗಡೆಗೆ ತಡೆ ನೀಡಲು ಸೂಚನೆ ನೀಡಿದೆ.

“ಗೃಹಲಕ್ಷ್ಮೀ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಹಣ ಪಾವತಿಯಾಗುತ್ತಿರುವುದನ್ನು ತಡೆಗಟ್ಟಲು ತಕ್ಷಣವೇ ಕ್ರಮ ಕೈಗೊಳ್ಳಬೇಕು” ಎಂದು ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದ್ದಾರೆ.

“ಗೃಹಲಕ್ಷ್ಮೀ ಯೋಜನೆಯ ಮರಣ ಹೊಂದಿದ ಫಲಾನುಭವಿಗಳ ವಿವರಗಳನ್ನು ಪತ್ತೆಹಚ್ಚಲು ಅಂಗನವಾಡಿ ಕಾರ್ಯಕರ್ತೆಯರ ನೆರವು ಪಡೆಯಬೇಕು. ಮೃತಪಟ್ಟವರ ಪ್ರಮಾಣ ಪತ್ರಗಳನ್ನು ಸಂಗ್ರಹಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ರಾಜ್ಯ ಮಟ್ಟಕ್ಕೆ ವರದಿ ಸಲ್ಲಿಸಿ, ಅಂತಹ ಖಾತೆಗಳಿಗೆ ಹಣ ಪಾವತಿಯಾಗುವುದನ್ನು ತಕ್ಷಣ ತಡೆಹಿಡಿಯಬೇಕು” ಎಂದು ನಿರ್ದೇಶನ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಜಿಲ್ಲೆಯಲ್ಲಿ ಮೃತಪಟ್ಟವರ ಹೆಸರಿನಲ್ಲಿ ಹಣ ವರ್ಗಾವಣೆಯಾಗುವುದನ್ನು ತಡೆಯಲು ಇ-ಗವರ್ನೆನ್ಸ್ ಅಂಕಿ-ಅಂಶಗಳ ಆಧಾರದ ಮೇಲೆ ಕ್ರಮವಹಿಸಲಾಗಿದ್ದು, ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ ಮೃತಪಟ್ಟ 8,843 ಮಹಿಳೆಯರ ಹೆಸರನ್ನು ಪಟ್ಟಿಯಿಂದ ಕೈಬಿಡಲು ಪ್ರಕ್ರಿಯೆ ಆರಂಭವಾಗಿದೆ.

ಮೃತ ಫಲಾನುಭವಿಗಳ ಖಚಿತ ಮಾಹಿತಿ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಲೆಕ್ಕಿಗರು ಮನೆ ಮನೆಗೆ ತೆರಳಿ ಮರಣ ಪ್ರಮಾಣಪತ್ರಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಪರಿಶೀಲನೆಯು ಮುಂದಿನ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular