Gruha Lakshmi Scheme: ಈ ಕಾರಣಕ್ಕೆ ಇನ್ನೂ 9.44 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ಲ!

ಬೆಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ್ದವರ ಪೈಕಿ 9.44,155 ಅರ್ಜಿ ದಾರರಿಗೆ ಇದುವರೆಗೆ ಹಣ ವರ್ಗಾವಣೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಇನ್ನೂ 9.44,155 ಅರ್ಜಿದಾರರಿಗೆ ಹಣ ವರ್ಗಾವಣೆ ಆಗಿಲ್ಲ. ಈ ಪೈಕಿ 3082 ಅರ್ಜಿದಾರರು ಮರಣ ಹೊಂದಿದ್ದು, ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅದನ್ನು ಸಪರಿಪಡಿಸುವ ಕಾರ್ಯ ನಡೆದಿದೆ ಎಂದು ಹೇಳಿದ್ದಾರೆ.

5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. ಿದರಲ್ಲಿ 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read