HomeKarnatakaGruha Lakshmi Scheme : ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಲೀಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ?...

Gruha Lakshmi Scheme : ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಲೀಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ? ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಅಂದೇ ಏಕಕಾಲದಲ್ಲಿ ಮನೆಯ ಯಜಮಾನಿಯರ ಖಾತೆಗೆ 2,000 ರೂ. ಜಮಾ ಆಗಲಿದೆ.

ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ.

ಪಡಿತರ ಚೀಟಿ ಸಂಖ್ಯೆಯನ್ನು 8147500500 ಈ ಸಹಾಯವಾಣಿ ಸಂಖ್ಯೆಗೆ SMS ಮಾಡುವ ಮೂಲಕ ನೀವು ನಿಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಿಸಿಕೊಳ್ಳಬಹುದು. ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ SMS ಕಳುಹಿಸಬೇಕು. ನಿಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದ್ದರೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ ಯಶಸ್ವಿಯಾಗಿ ಸಲ್ಲಿಕೆ ಆಗಿದೆ ಎಂದು ನಿಮ್ಮ ಅರ್ಜಿ ಸಂಖ್ಯೆ ಜೊತೆ SMS ಗೆ ರಿಪ್ಲೈ ಬರುತ್ತದೆ. ಒಂದೇ ವೇಳೆ ಆಗಿಲ್ಲವಾದರೆ ಪುನಃ ಹೋಗಿ ಮತ್ತೆ ನೀವು ಅರ್ಜಿ ಸಲ್ಲಿಸಬಹುದು.

ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು. ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು. ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಲಾಗಿದ್ದು. ಆದ್ದರಿಂದ ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಗಾಗಿ ಅರ್ಜಿ ಸಲ್ಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular