HomeKarnatakaGruha Lakshmi Scheme : 'ಗೃಹಲಕ್ಷ್ಮಿ’ ಯೋಜನೆ ಅನುಷ್ಠಾನಗೊಳಿಸಿಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

Gruha Lakshmi Scheme : ‘ಗೃಹಲಕ್ಷ್ಮಿ’ ಯೋಜನೆ ಅನುಷ್ಠಾನಗೊಳಿಸಿಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ ‘ಗೃಹಲಕ್ಷ್ಮಿ’ ಯೋಜನೆ’ಯನ್ನು ಜಾರಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ “ಗೃಹಲಕ್ಷ್ಮಿ’ ಯೋಜನೆಯನ್ನು 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಆದೇಶದಲ್ಲಿ ರಾಜ್ಯದ ಕುಟುಂಬದಲ್ಲಿನ ಯಜಮಾನಿಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು. ಸಂಬಂಧಿಸಿದ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಮಂಜೂರಾತಿ ಪ್ರಾಧಿಕಾರವೆಂದು ಪರಿಗಣಿಸಿ ಆದೇಶಿಸಲಾಗಿದೆ. ಈ ಹಿನ್ನೆಲೆ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆಯನ್ನು ಈ ಆದೇಶಕ್ಕೆ ಲಗತ್ತಿಸಿರುವ ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಆದೇಶ ಹೊರಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಉದ್ದೇಶ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000-00ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ.
ಗ್ರಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ.

ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು:

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.
3. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪ್ರತಿ ಜಿಎಸ್ಟಿ ರಿಟರ್ನ್ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.

ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು:

1. ಪಡಿತರ ಚೀಟಿಯ ಸಂಖ್ಯೆ
2. ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ, 3. ಯಜಮಾನಿಯ ಆಧಾರ್ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.
ನೋಂದಣಿ ವಿಧಾನ:
1. ಫಲಾನುಭವಿಗಳು, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.
2. ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದ “ಪ್ರಜಾ ಪ್ರತಿನಿಧಿ” (citizen volunteers) ಮೂಲಕ ಸಹ ಸೇವಾಸಿಂಧು ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
3. ಪತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
4. ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.
5. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು.
6. ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. 7. ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಪಡಿಸಿರುವುದಿಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular