Gruha Lakshmi Scheme : ರಾಜ್ಯದ ಮಹಿಳೆಯರೇ ಗಮನಿಸಿ : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ‘ ಗೃಹಲಕ್ಷ್ಮೀ’ ಯೋಜನೆಗೆ ಇದೇ ಜುಲೈ 19 ರಂದು ಚಾಲನೆ ಸಿಗಲಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಿರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ‘ಸ್ತ್ರೀ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಇಟ್ಟಿರುವ ಗೃಹಲಕ್ಷ್ಮೀ ” ಯೋಜನೆಗೆ ಇದೇ ಜುಲೈ 19 ರಂದು ಚಾಲನೆ ಸಿಗಲಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಿರಿ’ ಎಂದು ಸಲಹೆ ನೀಡಿದ್ದಾರೆ.

ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಉಚಿತವಾಗಿನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂಸೇವಕ ‘ ಪ್ರಜಾಪ್ರತಿನಿಧಿಗಳು ‘ ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ.ನೋಂದಣಿಗೆ ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಡಿತರ ಕಾರ್ಡ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

‘ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ.
ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಅಗತ್ಯ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡುತ್ತೇವೆ. ಬೇರೆ ಖಾತೆಗೆ ಆರ್ ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read