HomeKarnatakaGruha Lakshmi Scheme : ಯಜಮಾನಿಯರೇ ಗಮನಿಸಿ : ಇನ್ಮುಂದೆ ಈ ಸರಳ ವಿಧಾನದ ಮೂಲಕ...

Gruha Lakshmi Scheme : ಯಜಮಾನಿಯರೇ ಗಮನಿಸಿ : ಇನ್ಮುಂದೆ ಈ ಸರಳ ವಿಧಾನದ ಮೂಲಕ ನೀವು ನೇರವಾಗಿ ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಬಹುದು

ಬೆಂಗಳೂರು: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್ಎಂಎಸ್ ಅವಲಂಭಿಸದೇ ನೇರವಾಗಿ ನೋಂದಣಿ ಕೇಂದ್ರಗಳಿಗೆ ದಾಖಲಾತಿಗಳೊಂದಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.ಗೃಹ ಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಸ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ನಿಮ್ಮ ಬದಲು ಪತಿ-ಮಕ್ಕಳು ಹೋಗಬಹುದು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.ಗೃಹಲಕ್ಷ್ಮಿ’ ಗೆ ಅರ್ಜಿ ಹಾಕಲು ಮನೆ ಯಜಮಾನಿಯೇ ಹೋಗಬೇಕಿಲ್ಲ, ಪತಿ ಅಥವಾ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.ಗ್ರಾಮ ಒನ್, ಕರ್ನಾಟಕ, ಒನ್ ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಾ ಗಳಲ್ಲಿ SMS ಇಲ್ಲದೆ ಇದ್ದರೂ ಯಾರು ಬೇಕಾದರೂ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರು ಅರ್ಜಿ ಸಲ್ಲಿಸಲು ಇನ್ನು ಮುಂದೆ ಸ್ಲಾಟ್ ಬುಕ್ಕಿಂಗ್ ಗಾಗಿ SMS ಅನ್ನು ಕಾಯುವ ಅವಶ್ಯಕತೆ ಇಲ್ಲ. ಬದಲಾಗಿ ನೇರವಾಗಿಯೇ ಹೋಗಿ ಫಲಾನುಭವಿಗಳು ತಮಗೆ ಹತ್ತಿರದಲ್ಲಿರುವ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸೇವಾಸಿಂಧು ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ. ನೀವು ನಿಮ್ಮ ಒಟಿಪಿ ಬರುವ ಮೊಬೈಲ್ ತೆಗೆದುಕೊಂಡು ಹೋಗಿ ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಬಹುದು. ನೇರವಾಗಿ ಪೂರಕ ದಾಖಲೆಗಳ ಜೊತೆ ಹೋಗಿ ಇಂದಿನಿಂದಲೇ ಈ ಮೇಲೆ ತಿಳಿಸಿದ ಸೇವಾಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular