Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 80 ಲಕ್ಷಕ್ಕೂ ಹೆಚ್ಚು ಮಹಿಳೆಯರಿಂದ ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಇಂದು ಭಾನುವಾರ ರಜಾ ದಿನವಾಗಿದ್ದರೂ ನೋಂದಣಿಗೆ ಅವಕಾಶ ನೀಡಲಾಗಿದೆ.

ರಾಜ್ಯಾದ್ಯಂತ ಗೃಹಲಕ್ಷ್ಮೀ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಜುಲೈ 29 ರ ಶನಿವಾರ ರಜಾ ದಿನವಾಗಿದ್ದರೂ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಒಂದೇ ದಿನ 3,87,083 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಸಿಕ್ಕ ದಿನದಿಂದ ಈವರೆಗೆ ಒಟ್ಟಾರೆಯಾಗಿ 80,90,23 4 ಮಂದಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಭಾನುವಾರವಾದ ಇಂದು ರಜಾ ದಿನವಾಗಿದ್ದರೂ ನೋಂದಣಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read