HomeKarnatakaಇಂದಿನಿಂದ ಅನರ್ಹ 'ಗೃಹಲಕ್ಷ್ಮಿ'ಯರ ಪತ್ತೆಗೆ ಮನೆಮನೆ ಸಮೀಕ್ಷೆ: ಬಯೋಮೆಟ್ರಿಕ್ ಫೇಸ್ ಅಥೆಂಟಿಕೇಷನ್ ಸರ್ವೇ

ಇಂದಿನಿಂದ ಅನರ್ಹ ‘ಗೃಹಲಕ್ಷ್ಮಿ’ಯರ ಪತ್ತೆಗೆ ಮನೆಮನೆ ಸಮೀಕ್ಷೆ: ಬಯೋಮೆಟ್ರಿಕ್ ಫೇಸ್ ಅಥೆಂಟಿಕೇಷನ್ ಸರ್ವೇ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ತುಂಬಿದೆ. ಇದೇ ವೇಳೆ ಅನರ್ಹ ಫಲಾನುಭವಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

ಬಯೋಮೆಟ್ರಿಕ್, ಫೇಸ್ ಅಥೆಂಟಿಕೇಶನ್ ಮೂಲಕ ಗೃಹಲಕ್ಷ್ಮಿಯರ ಮನೆ ಮನೆ ಸಮೀಕ್ಷೆ ನಡೆಸಲಿದೆ. ಇಂದಿನಿಂದ ಒಂದು ತಿಂಗಳ ಕಾಲ ಸರ್ವೆ ನಡೆಸಲಾಗುವುದು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪೈಕಿ ಅನರ್ಹರರನ್ನು ಗುರುತಿಸಲು ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಫೇಶಿಯಲ್ ಅಥೆಂಟಿಕೇಶನ್ ಮೂಲಕ ಮರುಪರಿಶೀಲನೆ ನಡೆಸಲು ಸರ್ಕಾರ ಆದೇಶಿಸಿದೆ. ಮಹಿಳೆಯರಿಗೆ ಮಾಸಿಕ 2,000 ರೂ. ನೀಡಿ ಅವರಿಗೆ ಆರ್ಥಿಕ ಶಕ್ತಿ ತುಂಬಿದ ಈ ಯೋಜನೆಗೆ ಮೂರು ವರ್ಷ ಪೂರ್ಣಗೊಳ್ಳುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಈ ಬಗ್ಗೆ ಮಾಹಿತಿ ನೀಡಿದ್ದು, 2023ರ ಆಗಸ್ಟ್ ನಿಂದ ಇದುವರೆಗೆ 1.24 ಕೋಟಿ ಫಲಾನುಭವಿಗಳಿಗೆ 32 ಕಂತುಗಳಲ್ಲಿ 76,951.13 ಕೋಟಿ ರೂ. ಗೃಹಲಕ್ಷ್ಮಿ ಸಹಾಯಧನ ಪಾವತಿಸಲಾಗಿದೆ. ಈ ಅವಧಿಯಲ್ಲಿ ಮರಣ ಹೊಂದಿದ ಪ್ರಕರಣ, ವಲಸೆ ಹೋದವರು ಮತ್ತು ಅರ್ಹರಲ್ಲದವರು ಕೂಡ ಗೃಹಲಕ್ಷ್ಮಿ ಸಹಾಯಧನ ಪಡೆದುಕೊಂಡಿದ್ದಾರೆ. ಹೀಗಾಗಿ ಅನರ್ಹರನ್ನು ಗುರುತಿಸಿ ಫಲಾನುಭವಿಗಳಿಗೆ ಸೌಲಭ್ಯ ಮುಂದುವರಿಸಲು ಮರು ಪರಿಶೀಲನಾ ಅಭಿಯಾನ ನಡೆಸಲಾಗಿದೆ. ಇದಕ್ಕಾಗಿ 20 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular