HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಗೃಹಜ್ಯೋತಿ’ ಉಚಿತ ವಿದ್ಯುತ್ ಶೂನ್ಯ ಬಿಲ್ ನೀಡಿಕೆಗೆ ಇಂದು ಸಿಎಂ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಗೃಹಜ್ಯೋತಿ’ ಉಚಿತ ವಿದ್ಯುತ್ ಶೂನ್ಯ ಬಿಲ್ ನೀಡಿಕೆಗೆ ಇಂದು ಸಿಎಂ ಅಧಿಕೃತ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಬಿಲ್ ನೀಡಿಕೆ ಆ. 1 ರಿಂದ ಆರಂಭವಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ.

ಮೊದಲ ತಿಂಗಳಲ್ಲಿ 1.42 ಕೋಟಿ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯಲಿವೆ. ಜುಲೈ 27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ವಿನಾಯಿತಿ ಸಿಗಲಿದೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರಿಗೆ ಆಗಸ್ಟ್ ನಲ್ಲಿ ಪ್ರಯೋಜನ ಸಿಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 1ರಿಂದ ಶೂನ್ಯ ಬಿಲ್ ವಿತರಣೆ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಅಧಿಕೃತ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮೊದಲಾದವರು ಭಾಗವಹಿಸಲಿದ್ದಾರೆ. ಸಾಂಕೇತಿಕವಾಗಿ 10 ಜನರಿಗೆ ಶೂನ್ಯ ಬಿಲ್ ವಿತರಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular