HomeKarnatakaವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಗೃಹಜ್ಯೋತಿ ಬಿಲ್ ವಸೂಲಿ ಇಲ್ಲವೆಂದು ಸಚಿವರ ಸ್ಪಷ್ಟನೆ

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಗೃಹಜ್ಯೋತಿ ಬಿಲ್ ವಸೂಲಿ ಇಲ್ಲವೆಂದು ಸಚಿವರ ಸ್ಪಷ್ಟನೆ

ಬೆಂಗಳೂರು: ಗೃಹಜ್ಯೋತಿ ಹಣ ಸರ್ಕಾರ ಕೊಡದಿದ್ದರೆ ಗ್ರಾಹಕರಿಂದ ವಸೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಗೃಹಜ್ಯೋತಿ ಹಣ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು. ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಇಲ್ಲ. ರಾಜ್ಯ ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶವಿಲ್ಲ. ಯೋಜನೆ ಘೋಷಣೆಯ ಸಂದರ್ಭದಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿತ್ತು. ಸಬ್ಸಿಡಿ ಮೊತ್ತ ಸರ್ಕಾರ ಪಾವತಿಸಲಿದೆ ಎಂದು ಹೇಳಿದ್ದೆವು. ಅದರಂತೆ ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 2025ರ ವರೆಗಿನ ಸಹಾಯಧನ ಪಾವತಿಸಿದ್ದೇವೆ. ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೂ ಸಹಾಯಧನ ಪಾವತಿಸಲಾಗಿದೆ. ಕೆಇಆರ್‌ಸಿ ನಿಯಮದಲ್ಲಿ ಸರ್ಕಾರ ಹಣ ನೀಡದಿದ್ದರೆ ಜನರಿಂದ ವಸೂಲಿ ಎಂದು ನಿಯಮವನ್ನು ತಪ್ಪಾಗಿ ಅರ್ಥೈಸಲಾಗಿದೆ. ಗ್ರಾಹಕರಿಂದ ಹಣ ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಗೃಹಜ್ಯೋತಿ ಯೋಜನೆ ಮುಂದುವರಿಸಲು ಇಲಾಖೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular