ಆ.5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ: 1.42 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಜ್ಯೋತಿ ಯೋಜನೆಯಡಿ ಅರ್ಹರಿಗೆ ಶೂನ್ಯ ಬಿಲ್ ವಿತರಣೆ ಆಗಸ್ಟ್ 1ರಿಂದಲೇ ಆರಂಭವಾಗಿದ್ದು, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಇಂಧನ ಸಚಿವ ಕೆ.ಜೆ ಜಾರ್ಜ್ ಈ ಕುರಿತು ಮಾಹಿತಿ ನೀಡಿದ್ದಾರೆ. ಆಗಸ್ಟ್ 5ರಂದು ಕಲಬುರಗಿಯ ಎನ್.ವಿ. ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೃಹಜ್ಯೋತಿ ಯೋಜನೆಗೆ ಸಿಎಂ ಚಾಲನೆ ನೀಡುವರು. ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಸಚಿವ ಅನೇಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

1.42 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಿಂದ ಅನುಕೂಲವಾಗಲಿದೆ. 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಈ ಯೋಜನೆಯಿಂದ ಕುಟುಂಬದ ನಿರ್ವಹಣಾ ವೆಚ್ಚ ಕಡಿಮೆಯಾಗಲಿದ್ದು, ಆರ್ಥಿಕ ಪ್ರಗತಿ ಸಾಮಾಜಿಕ ಭದ್ರತೆ ಸಿಗಲಿದೆ ಎಂದು ಜಾರ್ಜ್ ಹೇಳಿದ್ದಾರೆ.

ಯೋಜನೆ ಅನುಷ್ಠಾನದ ಮೊದಲ ತಿಂಗಳಿನಲ್ಲಿ 1.42 ಕೋಟಿ ಕುಟುಂಬಗಳು ಪ್ರಯೋಜನ ಪಡೆಯಲಿವೆ. ಜುಲೈ 27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕ ಶೂನ್ಯವಾಗಿರುತ್ತದೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್ ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟಂಬರ್ ಬಿಲ್ ನಲ್ಲಿ ಪ್ರಯೋಜನ ಪಡೆಯಲಿದ್ದಾರೆ. ಗೃಃಜ್ಯೋತಿ ಯೋಜನೆ ನೋಂದಣಿ ಮಾಡಿಕೊಳ್ಳಲು ಅಂತಿಮ ದಿನಾಂಕ ಘೋಷಿಸಿಲ್ಲ. ಯಾವಾಗ ನೋಂದಾಯಿಸಿಕೊಂಡರೂ ಅದರ ನಂತರದ ತಿಂಗಳಿನಿಂದ ಸೌಲಭ್ಯ ಪಡೆಯಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read