HomeKarnataka‘ಕುಟುಂಬದ ಯಜಮಾನಿ’ಯರ ಖಾತೆಗೆ 2 ಸಾವಿರ ರೂ. ಪಾವತಿಸುವ ‘ಗೃಹಲಕ್ಷ್ಮಿ’ ಸೌಲಭ್ಯ ಪಡೆಯಲು ಇಲ್ಲಿದೆ ಮುಖ್ಯ...

‘ಕುಟುಂಬದ ಯಜಮಾನಿ’ಯರ ಖಾತೆಗೆ 2 ಸಾವಿರ ರೂ. ಪಾವತಿಸುವ ‘ಗೃಹಲಕ್ಷ್ಮಿ’ ಸೌಲಭ್ಯ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್‍ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.

ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ 3,45,386 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 2000 ರೂ.- ಹಣ ಜಮೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ 31,512 ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್‍ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್‍ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್‍ಡೇಟ್ ಮಾಡಿಸಿಕೊಳ್ಳುವುದು.

ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್‍ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular