HomeKarnatakaಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

ಬೆಂಗಳೂರು- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸಲ್ಲಿಸಿದ ಮನವಿ ಪತ್ರಕ್ಕೆ ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸುವಂತೆ ಸೂಚನೆ ನೀಡಿದ್ದಾರೆ. “ಬ್ಯಾಂಕ್ ಆಡಳಿತ ಮಂಡಳಿಗೆ ಪತ್ರ ಬರೆಯಿರಿ, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಯಿಂದ ಹಣವನ್ನು ಸಾಲದ ಕಂತಿಗೆ ಕಡಿತಗೊಳಿಸದಂತೆ ಸ್ಪಷ್ಟವಾಗಿ ತಿಳಿಸಿ” ಎಂದು ಮುಖ್ಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದ್ದಾರೆ.

ಮನವಿ ಪತ್ರದಲ್ಲೇನಿದೆ?

ಮನವಿ ಪತ್ರದಲ್ಲೇನಿದೆ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಗೃಹಲಕ್ಷ್ಮಿ ಹಣ ಕಡಿತದಿಂದ ಬಡ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅದಕ್ಕೆ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಕುರಿತು ವಿಸ್ತೃತವಾಗಿ ಮಾಹಿತಿ ನೀಡಿದ್ದಾರೆ.

ಪ್ರತಿ ತಿಂಗಳು 1 ಕೋಟಿ 24 ಲಕ್ಷದ 48 ಸಾವಿರ ಕುಟುಂಬದ ಯಜಮಾನಿಯರ ಖಾತೆಗೆ ಜಮೆಯಾಗುತ್ತಿರುವ ₹2,000 ಹಣವು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ನಿತ್ಯದ ಅಗತ್ಯಗಳು, ಮಕ್ಕಳ ಶಿಕ್ಷಣ ಹಾಗೂ ಮಹಿಳೆಯರ ಸ್ವಾವಲಂಬನೆಗೆ ದೊಡ್ಡ ಆಸರೆಯಾಗಿದೆ. ಆದರೆ, ವಾಣಿಜ್ಯ ಬ್ಯಾಂಕುಗಳು, ಖಾಸಗಿ ಫೈನಾನ್ಸ್ ಕಂಪನಿಗಳು ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಜಮೆಯಾದ ತಕ್ಷಣವೇ ಹಳೆಯ ಸಾಲದ ಬಾಕಿ ಅಥವಾ ಬಡ್ಡಿಯ ನೆಪವೊಡ್ಡಿ ಹಣ ಕಡಿತಗೊಳಿಸುತ್ತಿವೆ. ಫಲಾನುಭವಿಗಳ ಗಮನಕ್ಕೂ ತರದೆ ಕಡಿತ ಮಾಡಿಕೊಳ್ಳುತ್ತಿರುವುದರಿಂದ ಯೋಜನೆಯ ಮೂಲ ಆಶಯಕ್ಕೇ ಧಕ್ಕೆ ಉಂಟಾಗುತ್ತಿದೆ.

ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್‌ಗಳ ಪರಿಶೀಲನಾ ಸಮಿತಿ (DLRC) ಸಭೆಗಳಲ್ಲೂ ಜಿಲ್ಲಾಡಳಿತಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, “ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣವನ್ನು ಸಾಲದ ಕಂತು ಅಥವಾ ಬಡ್ಡಿಗೆ ಮುಟ್ಟುಗೋಲು ಹಾಕಿಕೊಳ್ಳಬಾರದು” ಎಂದು ಈಗಾಗಲೇ ಸ್ಪಷ್ಟಪಡಿಸಿವೆ.

ಸುದ್ದಿ ಸಮಿತಿ ಗೆ ಸೂಚನೆ

ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಬ್ಯಾಂಕುಗಳು ಗೃಹಲಕ್ಷ್ಮಿ ಅನುದಾನವನ್ನು ಫಲಾನುಭವಿಯ ಹಳೆಯ ಸಾಲ, ಕೃಷಿಯೇತರ ಸಾಲ ಅಥವಾ ಬಡ್ಡಿಗೆ ಜಮೆ ಮಾಡಿಕೊಳ್ಳದಂತೆ ಮತ್ತು ಮಹಿಳೆಯರು ಕುಟುಂಬ ನಿರ್ವಹಣೆಗೆ ಹಣವನ್ನು ಮುಕ್ತವಾಗಿ ಡ್ರಾ ಮಾಡಲು ಅವಕಾಶ ನೀಡುವಂತೆ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ (SLBC) ಮೂಲಕ ಕಠಿಣ ಸುತ್ತೋಲೆ ಹೊರಡಿಸಬೇಕು.

ಫಲಾನುಭವಿಗಳ ಖಾತೆಗೆ ಹಣ ಬರುತ್ತಿದ್ದಂತೆ ಸ್ಥಳದಲ್ಲೇ ಬಲವಂತವಾಗಿ ವಸೂಲಿ ಮಾಡುವ ಅಥವಾ ಬೆದರಿಕೆ ಒಡ್ಡುವ ಖಾಸಗಿ ಫೈನಾನ್ಸ್ ಕಂಪನಿಗಳು ಮತ್ತು ಏಜೆಂಟರ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿ, ಅವರ ಪರವಾನಗಿ ರದ್ದುಪಡಿಸುವಂತಹ ಕಠಿಣ ಎಚ್ಚರಿಕೆ ನೀಡಬೇಕು.

ಮಹಿಳೆಯರ ಸ್ಪಷ್ಟ ಲಿಖಿತ ಒಪ್ಪಿಗೆಯಿಲ್ಲದೆ ಈಗಾಗಲೇ ಸಾಲದ ಬಾಕಿಗೆ ಕಡಿತಗೊಳಿಸಲಾಗಿರುವ ಹಣವನ್ನು ತಕ್ಷಣವೇ ಆಯಾ ಮಹಿಳೆಯರ ಖಾತೆಗೆ ಮರುಜಮೆ ಮಾಡಿಸಲು ಬ್ಯಾಂಕುಗಳಿಗೆ ತಾಕೀತು ಮಾಡುವಂತೆ ಜಿಲ್ಲಾ ಪಂಚಾಯಿತಿಗಳ ಸಿಇಒಗಳಿಗೆ ಸೂಚನೆ ನೀಡಬೇಕು.

ಅಕ್ರಮ ಹಣ ಕಡಿತ ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರ ಮೇಲುಸ್ತುವಾರಿ ವಹಿಸಬೇಕು. ಜೊತೆಗೆ, ವಿವಿಧ ಇಲಾಖೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ನಡೆಸುವ ನಿಯಮಿತ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಈ ವಿಷಯವನ್ನು ಕಡ್ಡಾಯವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular