Gruha lakshmi Scheme : ಮಹಿಳೆಯರೇ ಗಮನಿಸಿ : ಇಂದಿನಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು

ಮೈಸೂರು : ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು.
ಯಾವೆಲ್ಲಾ ದಾಖಲೆಗಳು ಬೇಕು..?

1) ರೇಷನ್ ಕಾರ್ಡ್
2. ಬ್ಯಾಂಕ್ ಪಾಸ್ಬುಕ್
3. ಆಧಾರ್ ಕಾರ್ಡ್
4. ಯಾವುದಾದರೂ ಗುರುತಿನ ಚೀಟಿ

ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು. ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಯೋಜನೆಗಾಗಿ ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗಿದೆ. ಈ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳಿಗೆ ಆ್ಯಪ್ ತೋರಿಸಿ ವಿವರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡಲಾಗುವುದು. ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ, ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹೇಳಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೊಡುವ ‘ಶಕ್ತಿ’ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ಪ್ರತಿನಿತ್ಯ ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read