Gruhalakshmi scheme : 2000 ರೂ. ಅತ್ತೆಗೋ, ಸೊಸೆಗೋ..? ಇಂದಿನ ಸಿಎಂ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರದ ‘ಗೃಹಲಕ್ಷ್ಮೀ’ (Gruhalakshmi scheme) ಯೋಜನೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12 :30 ಕ್ಕೆ ಮಹತ್ವದ ಸಭೆ ನಿಗದಿಯಾಗಿದೆ.

ಯೋಜನೆ ಜಾರಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ನವರು ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

2000 ರೂ. ಹಣ ಅತ್ತೆಗೋ ಅಥವಾ ಸೊಸೆಗೋ ಎಂಬ ಗೊಂದಲ ಮೂಡಿದ್ದು, ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆ ನಡೆಯಲಿದ್ದು, ಇಂದಿನ ಸಭೆ ಬಹಳ ಮಹತ್ವದ್ದಾಗಿದೆ. ರಾಜ್ಯ ಸರ್ಕಾರದ ‘ಗೃಹಲಕ್ಷ್ಮೀ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ (Application Form) ಬಿಡುಗಡೆ ಮಾಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read